Monday, September 16, 2024
Google search engine
Homeಗದಗಗದಗ : ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಗದಗ : ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಬೆಂಗಳೂರು ಸೆಪ್ಟೆಂಬರ್‌ 04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ

ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 19 ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.

ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಗದಗ ಸೆಪ್ಟೆಂಬರ್ 4 ; 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ, ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತದೆ. ಪ್ರಕರಣವು 01.08.2023 ರಿಂದ 31.07.2024ರೊಳಗೆ ನಡೆದಿರಬೇಕು. ದಿನಾಂಕ:01.08.2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.

ಅರ್ಜಿಗಳನ್ನು ಪಡೆದು ಸೆಪ್ಟೆಂಬರ್ 18 ರೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಗದಗ, ಕೊಠಡಿ ಸಂ.06, ಜಿಲ್ಲಾ ಆಡಳಿತ ಭವನ ಗದಗ (ದೂರವಾಣಿ ಸಂ.08372-220711) ಇಲ್ಲಿ ಕಛೇರಿ ಸಮಯದಲ್ಲಿ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಾರ್ಯಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 06 ಗದಗ ಇಲ್ಲಿ ಸಂಪರ್ಕಿಸಬಹುದಾಗಿದೆ.

ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಅಂಗವಾಗಿ

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ

ಗದಗ ಸೆಪ್ಟೆಂಬರ್ 3: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಸೆಪ್ಟೆಂಬರ್ 5 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.

ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದಿಯ ವ್ಯವಹಾರಗಳು , ಶಾಸನ ರಚನೆ ಮತ್ತು ಪ್ರವಾಸೊದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ, ಸಂಸದರುಗಳಾದ ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ.ಪಾಟೀಲ,ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆಯ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ , ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಆಗಮಿಸುವರು. ಶಾಲಾ ಶಿಕ್ಷಣ ಇಲಾಖೆಯ ವಿಶ್ರಾಂತ ಉಪನಿರ್ದೇಶಕ ಐ.ಬಿ.ಬೆನಕೊಪ್ಪ ಉಪನ್ಯಾಸ ನೀಡಲಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಸಿ ಕೊರವನವರ, ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ , ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡುವಿನಮನಿ, ಗದಗ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ ಸರ್ವರಿಗೂ ಸ್ವಾಗತ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ