ಗದಗ ಸೆಪ್ಟೆಂಬರ್ 4: ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ರವರ ನೇತೃತ್ವದಲ್ಲಿ ಹಾಗೂ ಸಂಬAಧಿಸಿದ ಸ್ಥಳಿಯ ಚುನಾಯಿತ ಪ್ರತಿನಿಧಿಗಳನ್ನು ಒಳಗೊಂಡAತೆ ಜಿಲ್ಲಾ ಮಟ್ಟದ ಜನತಾ ದರ್ಶನ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 18 ರಂದು ಗದಗ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲು ಗದಗ ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿರುತ್ತಾರೆ.
ಗದಗ ಜಿಲ್ಲಾಡಳಿತವು ಜನತಾದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಲು ಗದಗ ಜಿಲ್ಲಾಡಳಿತ ಭವನದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲದಾರ ಕಾರ್ಯಾಲಯಗಳಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಸಂಬAದಿಸಿದ ಅರ್ಜಿಗಳ ಸ್ವೀಕರಿಸುವ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಸೆಪ್ಟೆಂಬರ್ 5 ರಿಂದ 17 ರವರೆಗೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅಗತ್ಯ ದಾಖಲೆಗಳೊಂದಿಗೆ ಸದರಿ ಜಿಲ್ಲಾ ಮಟ್ಟದ ಜನತಾ ದರ್ಶನ ಅರ್ಜಿ ಸ್ವೀಕಾರ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸ್ವೀಕೃತವಾದ ಮನವಿಗಳನ್ನು ಕ್ರೋಡೀಕರಿಸಿ ಆದ್ಯತೆ ಮೇರೆಗೆ ಸೆಪ್ಟೆಂಬರ್ 18 ರಂದು ನಡೆಯುವ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ತಿಳಿಸಿದ್ದಾರೆ.