ಗದಗ : ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರಿಂದ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ, ಗದಗ ಇವರ ಸಹಯೋಗದಲ್ಲಿ ದಿ ಗದಗ ಕೋ ಆಪ್ ಕಾಟನ್ ಸೇಲ್ ಸೊಸೈಟಿಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಹೆಸರು ಕಾಳು ಖರೀದಿ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಲಾಯಿತು. ಹೆಸರುಕಾಳು ಖರೀದಿ ಕೇಂದ್ರದಿAದ ಹೆಚ್ಚಿನ ಪ್ರಯೋಜನ ದೊರಕಿಸಿಕೊಳ್ಳುವಂತೆ ಹೆಸರು ಬೆಳೆಗಾರರಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಆರ್.ಪಾಟೀಲ, ಜಿಲ್ಲಾ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಮ್.ಬಿ.ಸಂಕದ, ರೈತರು ಹಾಜರಿದ್ದರು.