ಗದಗ ಸೆಪ್ಟೆಂಬರ್ 9: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ರೆಡ್ ರಿಬ್ಬನ್ ಕ್ಲಬ್‌ಗಳು ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ “ಯುವಜನೋತ್ಸವ -24” ರ ಅಂಗವಾಗಿ ಗದಗ ಜಿಲ್ಲೆಯ 17 ರಿಂದ 25 ವಯಸ್ಸಿನ ಪದವಿ/ಸ್ನಾತ್ತಕೋತ್ತರ/ವೃತ್ತಿಪರ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 10 ರಂದು ಬೆಳಿಗ್ಗೆ 8.30 ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಮ್ಯಾರಾಥಾನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್.ಐ.ವಿ /ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ ಏಡ್ಸ್ (ತಡೆ) ಕಾಯ್ದೆ 2017, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟಿçÃಯ ಸಹಾಯವಾಣಿ 1097, ಎಸ್.ಟಿ.ಐ. ಇತ್ಯಾದಿ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಸ್ಪರ್ಧೆಯ ಉದ್ದೇಶವಾಗಿದೆ.
ಸ್ಪರ್ಧೆಯು ಸೆಪ್ಟೆಂಬರ್ 10 ರಂದು ಬೆಳಿಗ್ಗೆ 8-30 ಕ್ಕೆ ನಗರದ ಕೆ.ಹೆಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಲಿದೆ. ಸ್ಪರ್ಧೆಯಲ್ಲಿ ಗದಗ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಿದ ದಿನದಂದು ಸರಿಯಾದ ಸಮಯಕ್ಕೆ ಹಾಜರಾಗಬೇಕು.ಗದಗ ಜಿಲ್ಲೆಯ ಪದವಿ/ಸ್ನಾತ್ತಕೋತ್ತರ/ವೃತ್ತಿಪರ ಕಾಲೇಜುಗಳ 17 ರಿಂದ 25 ವಯಸ್ಸಿನ ವಿದ್ಯಾರ್ಥಿಗಳು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸತಕ್ಕದ್ದು..ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜ ಐಡಿ ಕಾರ್ಡ & ಪ್ರಾಚಾರ್ಯರು/ಎನ್.ಎಸ್.ಎಸ್. ಅಧಿಕಾರಿಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸುವ ಕುರಿತು ಪತ್ರವನ್ನು ತೆಗೆದುಕೊಂಡು ಬರಬೇಕು.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿದ್ಯಾರ್ಥಿ (ಗಂಡು) & ವಿದ್ಯಾರ್ಥಿನಿಯರಿಗೆ (ಹೆಣ್ಣು) ಬೇರೆ ಬೇರೆಯಾಗಿ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರು (1 ಗಂಡು & 1 ಹೆಣ್ಣು) ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗುತ್ತದೆ. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಭಾಗವಹಿಸಬೇಕು.ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನದ ಮೊತ್ತವನ್ನು ನೇರವಾಗಿ ವಿಜೇತರ ಬ್ಯಾಂಕ ಖಾತೆಗೆ ಜಮಾ ಮಾಡಲಾಗುವುದು.ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಇರುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಪ್ರಥಮ ಬಹುಮಾನ- 5000 ರೂ, ದ್ವಿತೀಯ ಬಹುಮಾನ 3500 ರೂ, ತೃತೀಯ 2500 ರೂ. ಸಮಾಧಾನಕರ ಬಹುಮಾನ- 1000 ರೂಪಾಯಿಗಳು ( 4 ವಿದ್ಯಾರ್ಥಿಗಳಿಗೆ) ನೀಡಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ : 9449846975, 9880883458 ಸಂಪರ್ಕಿಸಬಹುದಾಗಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಂಗವಾಗಿ ಏರ್ಪಡಿಸಿದ 5 ಕಿ.ಮಿ ಮ್ಯಾರಥಾನ್ ಸೆ 10 ರಂದು ಬೆ 8.30 ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಿAದ ಪ್ರಾರಂಭವಾಗಿ ಭೂಮರೆಡ್ಡಿ ಸರ್ಕಲ್ ಹತ್ತಿಕಾಳ ಕೂಟ, ಟಾಂಗಾ ಕೂಟ, ಮಹೇಂದ್ರಕರ ಸರ್ಕಲ್, ಗಾಂಧಿ ಸರ್ಕಲ್ , ಹೆರಿಗೆ ಆಸ್ಪತ್ರೆ , ಕೆ.ಎಚ್.ಪಾಟೀಲ್ ಕ್ರೀಡಾಂಗಣಕ್ಕೆ ಬಂದು ತಲುಪುವುದು.