Wednesday, March 26, 2025
Google search engine
Homeಗದಗಗಜೇಂದ್ರಗಡಗದಗ : ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ...

ಗದಗ : ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ

ಗದಗ ಸೆ 9 : ಕರ್ನಾಟಕ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು

ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಸೋಮವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 14 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20469 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 5349 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು,ಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಸೆಪ್ಟೆಂಬರ್ 14 ರಂದು ಜರಗುವ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ.

ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು.

ಕಳೆದ ಜುಲೈ-2024 ರಂದು ಜರುಗಿದ ಲೋಕ ಅದಾಲತ್‌ನಲ್ಲಿ 2645 ಚಾಲ್ತಿ ಪ್ರಕರಣಗಳನ್ನು ಹಾಗೂ 21387 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 27482 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 07 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಸಿ.ಎಸ್.ಶಿವನಗೌಡ್ರ, ವಾರ್ತಾಧಿಕಾರಿ ವಸಂತ ಮಡ್ಲೂರ ಅವರು ಉಪಸ್ಥಿತರಿದ್ದರು.

ಬಾಕ್ಸ್ :ವ್ಯಾಜ್ಯಮುಕ್ತ ಗ್ರಾಮ ಮಾಡಲು ಈಗಾಗಲೇ ಜಿಲ್ಲೆಯಲ್ಲಿನ ಕಡಿಮೆ ಪ್ರಕರಣಗಳು ಇರುವ 51 ಗ್ರಾಮಗಳನ್ನು ಗುರುತಿಸಲಾಗಿದೆ. ಇವುಗಳ ಪೈಕಿ 10 ರಿಂದ 15 ಗ್ರಾಮಗಳನ್ನು ವ್ಯಾಜ್ಯಮುಕ್ತ ಗ್ರಾಮಗಳೆಂದು ಪ್ರಕಟಿಸಲಾಗುವುದು. 51 ಗ್ರಾಮಗಳ ಪೈಕಿ ಲಕ್ಷ್ಮೇಶ್ವರ ತಾಲೂಕಿನ 21 ಗ್ರಾಮಗಳು, ಗದಗ ತಾಲೂಕಿನ 3 ಗ್ರಾಮಗಳನ್ನು ವ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿಸಲು ಗುರುತಿಸಲಾಗಿದೆ. ರಾಷ್ಟ್ರೀಯ ಲೋಕ ಅದಾಲತ್ ದಲ್ಲಿ ರಾಜೀ ಸಂಧಾನಗಳ ಮೂಲಕ ವ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿಸಲು ಪ್ರಯತ್ನಿಸಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ