ಗದಗ ಸೆಪ್ಟೆಂಬರ್ 9: ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಸೆಪ್ಟೆಂಬರ್ 18 ರಂದು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಗದಗ ಜಿಲ್ಲಾಡಳಿತ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ಜರುಗಲಿದೆ.
ಗದಗ ಜಿಲ್ಲಾಡಳಿತವು ಜನತಾದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರ ಮನವಿಗಳಿಗೆ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಲು ಆನ್ ಲೈನ್ ಮೂಲಕ ಗದಗ ಜಿಲ್ಲಾಧಿಕಾರಿಗಳ ವೆಬ್‌ಸೈಟ್ https;//gadag.nic.in/ ದ್ದರಲ್ಲಿ ಅಳವಡಿಸಲಾದ ಜನತಾ ದರ್ಶನ -2024 ನೇದ್ದರ ಲಿಂಕ್ ನ್ನು ಕ್ಲಿಕ್ ಮಾಡಿ ಮನವಿ ಸಲ್ಲಿಸಲು ಸೆಪ್ಟೆಂಬರ್ 17 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಸ್ವೀಕೃತವಾದ ಮನವಿಗಳನ್ನು ಕ್ರೋಡೀಕರಿಸಿ ಆದ್ಯತೆ ಮೇರೆಗೆ ಸೆಪ್ಟೆಂಬರ್ 18 ರಂದು ನಡೆಯುವ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ತಿಳಿಸಿದ್ದಾರೆ.