ಗದಗ ಸೆಪ್ಟೆಂಬರ್ 9: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಸೆಪ್ಟೆಂಬರ್ 11 ರಂದು ಬೆಳಿಗೆ 10 ಗಂಟೆಗೆ ಹುಬ್ಬಳ್ಳಿಯಿಂದ ಗದಗ ಜಿಲ್ಲೆಗೆ ರಸ್ತೆ ಮೂಲಕ ಆಗಮಿಸುವರು. ಬೆ. 11 ಗಂಟೆಗೆ ನಾಗಾವಿಯಲ್ಲಿನ ಗ್ರಾಮಗಂಗೋತ್ರಿ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗಹಿಸುವರು. ಮಧ್ಯಾಹ್ನ 12 ಗಂಟೆಗೆ ಗದಗ ಜಿಲ್ಲೆಯಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ
.