Thursday, September 19, 2024
Google search engine
Homeಆರೋಗ್ಯಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ...

ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ 

ಸಾರ್ವಜನಿಕರ ಗಮನಕ್ಕೆ 

ಗದಗ ಸೆಪ್ಟೆಂಬರ್ 13 : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ.24000 ಸ್ಕಾಲರ್‌ಶಿಪ್ ಸೌಲಭ್ಯವಿದ್ದು ಜನಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವಾಟ್ಸಪ್‌ನಲ್ಲಿ ಹರಿದಾಡುತ್ತಿದ್ದು, ಜನರನ್ನು ಗೊಂದಲಕ್ಕೀಡು ಮಾಡಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ದಕ್ಷಿಣ ಕನ್ನಡ, ಮಂಗಳೂರು ಎಂಬ ಮೊಹರು ಹಾಕಿರುವ ಒಂದು ಅರ್ಜಿಯ ಫೋಟೋ ಹೊಂದಿರುವ ಈ ವಾಟ್ಸಪ್ ಸಂದೇಶ ಜನರ ಪೋನ್‌ಗಳಲ್ಲಿ ಒಂದು ತಿಂಗಳಿಂದ ಹರಿದಾಡುತ್ತಿದೆ.

ಈ ಸಂದೇಶವನ್ನು ನೋಡಿದ ಜನ ಪ್ರತಿನಿತ್ಯ ಗ್ರಾಮ ಪಂಚಾಯತಿ, ಕಂದಾಯ ಅಧಿಕಾರಿಗಳ ಕಛೇರಿ, ತಾಲೂಕ ಕಛೇರಿ, ಜಿಲ್ಲಾಧಿಕಾರಿ ಕಛೇರಿ ಹಾಗೂ ಮಕ್ಕಳ ರಕ್ಷಣಾ ಇಲಾಖೆ ಕಛೇರಿ ಸೇರಿ ಎಲ್ಲಾ ಕಡೆ ಅಲೆದಾಡುತ್ತಿದ್ದಾರೆ. ಮಕ್ಕಳ ರಕ್ಷಣಾಧಿಕಾರಿ ಕಛೇರಿಯಲ್ಲಿ ಪ್ರತಿದಿನ ನೂರಾರು ಜನರು ಬಂದು ಯೋಜನೆಯ ಬಗ್ಗೆ ಬಂದು ವಿಚಾರಿಸುತ್ತಿರುವುದು ಮತ್ತು ನೂರಾರು ಪೋನ್ ಕರೆಗಳು ಚಿಂತೆಗೀಡುಮಾಡಿದೆ

“ಮಧ್ಯವರ್ತಿಗಳ ಹಗಲು ದರೋಡೆ” ಈ ಸಂದೇಶವನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಅಮಾಯಕ ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊAದು ಅರ್ಜಿಗೆ ಕನಿಷ್ಠ 5 ರಿಂದ 10 ಸಾವಿರ ರೂ. ವಸೂಲಿ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ. ಆದರೆ ಈ ಸೌಲಭ್ಯದ ವಾಸ್ತವತೆಯೇ ಬೇರೆ ಇದೆ. ಈ ಯೋಜನೆಯನ್ನು 2011 ರಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ವ್ಯಾಪ್ತಿಗೆ ತರಲಾಗಿದೆ. ಇದನ್ನು ಸರ್ಕಾರಿ ಅನುದಾನಿತ ಪ್ರಾಯೋಜಕತ್ವ ಯೋಜನೆ ಎಂದು ಕರೆಯಲಾಗುತ್ತದೆ.

ಇದರಲ್ಲಿ ಎರಡು ವರ್ಗಗಳಿವೆ:

ಮುನ್ನೆಚ್ಚರಿಕೆ: ಸಂಕಷ್ಟಕ್ಕೆ ಈಡಾಗುವ ಕುಟುಂಬಕ್ಕೆ, ಮಗು ಜೈವಿಕ ಕುಟುಂಬದಲ್ಲೇ ಮುಂದುವರಿಸಲು ಪ್ರಾಯೋಜಕತ್ವ ಬೆಂಬಲ ಒದಗಿಸುವುದು, ಮಕ್ಕಳು ನಿರ್ಗತಿಕರಾಗುವುದನ್ನು, ಸಂಕಷ್ಟಕ್ಕಿಡಾಗುವುದು ಓಡಿಹೋಗುವುದು, ಬಲವಂತದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮುಂತಾದವುಗಳಿAದ ತಡೆಗಟ್ಟುವ ಪ್ರಯತ್ನ ಇದಾಗಿದೆ. ಪುನರ್ವಸತಿ: ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾದ ಸಂಸ್ಥೆಗಳಲ್ಲಿರುವ ಮಕ್ಕಳನ್ನು ಪ್ರಾಯೋಜಕತ್ವ ಸಹಾಯದೊಂದಿಗೆ ಕುಟುಂಬಗಳ ಜೊತೆಗೆ ಪುನರ್ ಸ್ಥಾಪಿಸುವುದು.

ಫಲಾನುಭವಿಯಾಗಳು ಇರುವ ಮಾನದಂಡಗಳು: ಯೋಜನೆಯ ಪ್ರಕಾರ ಫಲಾನುಭವಿಯಾಗಲು ಕೆಲವು ವಿಶೇಷ ಮಾನದಂಡಗಳಿವೆ. ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು, ಕಾರಾಗೃಹದಲ್ಲಿರುವ ಪೋಷಕರು ಮಕ್ಕಳು, ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಪಟ್ಟಿರುವ ಮಕ್ಕಳು, ಪಿ.ಎಂ ಕರ‍್ಸ ಫಾರ್ ಚಿಲ್ಡçನ್ ಯೋಜನೆಯ ಅನುಮೋದಿತ ಮಕ್ಕಳು, ಬಾಲಕಾರ್ಮಿಕ ಸಂತ್ರಸ್ತರು, ಮಕ್ಕಳ ಕಳ್ಳಸಾಗಾಣಿಕೆಗೆ ಒಳಗಾದ ಮಕ್ಕಳು, ಬಾಲ್ಯವಿವಾಹಕ್ಕೊಳಗಾದ ಮಕ್ಕಳು, ಪೊಕ್ಸೋ ಸಂತ್ರಸ್ತ ಮಕ್ಕಳು, ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ಪೋಷಕರ ಮಕ್ಕಳು, ಬಾಲಸ್ವರಾಜ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಮಕ್ಕಳು, ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಪಾಲನಾ ಸಂಸ್ಥೆಯ ಮಕ್ಕಳು ಹಾಗೂ ಇತರೆ ದುಡಿಯುವ ಪೋಷಕರನ್ನು ಕಳೆದುಕೊಂಡ ವಿಧವೆ, ವಿಚ್ಛೇದಿತ ಮತ್ತು ವಿಸ್ತೃತ ಕುಟುಂಬದ ಮಕ್ಕಳು ಈ ಯೋಜನೆಯ ವ್ಯಾಪ್ತಿಗೆ ಒಳಪಡುವರು.

ಜನರು ಯಾವುದೇ ರೀತಿಯ ಆಮಿಷಗಳಿಗೆ ಬಲಿಯಾಗಬಾರದು. ಈ ಯೋಜನೆಯ ಬಗ್ಗೆ ಸರಿಯಾಗಿ ಅರಿತುಕೊಳ್ಳಬೇಕು. ಇದು ಕೆಲವು ವಿಶೇಷ ಸಮಸ್ಯೆಗಳುಳ್ಳ ಮಕ್ಕಳಿಗಾಗಿ ಇರುವ ಒಂದು ಉಪಯುಕ್ತ ಯೋಜನೆಯಾಗಿದೆ. ಸಂತ್ರಸ್ತರು ಯಾವುದೇ ಮಧ್ಯವರ್ತಿಯ ಕೈಗೆ ಹಣ ಕೊಟ್ಟು ಮೋಸ ಹೋಗಬಾರದೆಂದು ಜಿಲ್ಲಾ ಮಕ್ಕಳ ರಕ್ಞಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು