Sunday, November 10, 2024
Google search engine
Homeಗದಗಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ

ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ

ಗದಗ ಸೆ.15: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸಿ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಸಂಕಲ್ಪ ಮಾಡಿ ರಾಷ್ಟ್ರಸೇವೆಯಲ್ಲಿ ತೊಡಗಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಹೇಳಿದರು.

ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ರವಿವಾರ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ನಿರ್ಮಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಜಾಪ್ರಭುತ್ವವು ಜನ ಸಾಮಾನ್ಯರಿಗೆ ಬಲ ತುಂಬುವ ವ್ಯವಸ್ಥೆಯಾಗಿದ್ದು ಹಾಗಾಗಿ ಸಾರ್ವಜನಿಕರಿಗೆ ಪ್ರಜಾಪ್ರಭುತ್ವ ಬಗ್ಗೆ ಜಾಗೃತ ಮೂಡಿಸುವ ಸಲುವಾಗಿ ಈ ಮಾನವ ಸರಪಳಿ ಕಾರ್ಯಕ್ರಮ ಜರುಗಿದ್ದು ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು, ಮಹಾತ್ಮಾ ಗಾಂದೀಜಿಯವರು ಬ್ರಿಟಿಷರಿಂದ ಸ್ವಾತಂತ್ರ್ಯ ನೀಡಿದ ಸಂದರ್ಭದಲ್ಲಿ ಮುಂಡರಗಿ ಭೀಮರಾಯರ ನೇತೃತ್ವದಲ್ಲಿ ಬಹುದೊಡ್ಡ ಹೋರಾಟ ಕೈಗೊಳ್ಳಲಾಗಿದೆ. ಅದನ್ನು ನಾವೆಲ್ಲರೂ ಸ್ಮರಿಸಬೇಕು ಎಂದು ಹೇಳಿದರು.

ನಮ್ಮ ದೇಶದಲ್ಲಿ ಅನೇಕ ಧರ್ಮ, ಸಾವಿರಾರು ಜಾತಿ, ನೂರಾರು ಭಾಷೆಗಳು ಇದ್ದರೂ ಎಲ್ಲರೂ ಒಂದಾಗಿ ಪರಸ್ಪರ ನಂಬಿಕೆ ವಿಶ್ವಾಸ ಗೌರವ ಪ್ರೀತಿಯಿಂದ ನಡೆದುಕೊಳ್ಳುತ್ತೆವೆ, ಎಲ್ಲಿಯವರೆಗೆ ಈ ಭ್ರಾತೃತ್ವ ಭಾವನೆ ಇರುತ್ತದೆಯೊ ಅಲ್ಲಿಯವರೆಗೆ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿರುತ್ತದೆ ಎಂದು ಅವರು ನುಡಿದರು.

1947 ಅಗಷ್ಟ 15 ರಿಂದ ಇಲ್ಲಿಯವರೆಗೆ ಸುಗಮವಾಗಿ ದೇಶವನ್ನು ನಡೆಸಿ ಎತ್ತರಕ್ಕೆ ತಂದಿದ್ದೇವೆ. ಆ ಸಂದರ್ಭದಲ್ಲಿ ಶೀಲಂಕಾ, ಬಾಂಗ್ಲಾದೇಶ, ನೇಪಾಳದಂತಹ ದೇಶಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಳವಡಿಸಿಕೊಂಡರು ನಂತರದ ದಿನಮಾನಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲಾಗಲಿಲ್ಲ, ಆದರೆ ಭಾರತ ಅಕ್ಕಪಕ್ಕದ ಪಾಕಿಸ್ತಾನ ಮತ್ತು ಚೀನಾ ದೇಶಗಳು ಆಗಾಗ ತೊಂದರೆ ನೀಡಿದರು ಅವೆಲ್ಲವನ್ನು ಹಿಮ್ಮೆಟಿಸಿ ದಮನಮಾಡಿ ಪ್ರಜಾಪ್ರಭುತ್ವವನ್ನು ಉಳಿಸಿ ಜಗತ್ತಿಗೆ ಮಾದರಿಯಾಗಿದ್ದೆವೆ ಎಂದರು.

ಪ್ರಜಾಪ್ರಭುತ್ವವು ಕಡು ಬಡವನಿಗೆ, ದಲಿತರಿಗೆ ಶೋಷಿತರಿಗೆ ಬಲ ತುಂಬುತ್ತದೆ ಈ ವ್ಯವಸ್ಥೆಯನ್ನು ಕೆಡಿಸುವ ಮನಸ್ಸಿನವರಿಗೆ ತಕ್ಕ ಉತ್ತರ ನೀಡಿ ಸಂವಿಧಾನದ ಪ್ರಸ್ತಾವನೆಯಲ್ಲಿರುವ ಆಶಯಗಳು ಈಡೇರಿಸಿ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಮುಟ್ಟಬೇಕು ಎಂದು ನುಡಿದರು.

ಜವಾಹರಲಾಲ್ ನೆಹರೂ ಅವರು ಪ್ರಜಾಪ್ರಭುತ್ವಕ್ಕೆ ಭದ್ರಬುನಾದಿ ಹಾಕಿ ಇಂದಿಗೇ 75 ವರ್ಷ ಗತಿಸಿದ ನಂತರವೂ, ಹಾಗೂ ಪ್ರಧಾನಿ ಹತ್ಯೆಯಂತಹ ಸನ್ನಿವೇಶ ನಡೆದರು ಇಂದಿಗೂ ದೇಶವೂ ಶಾಂತರೀತಿಯಿಂದ ಮುನ್ನುಗುತ್ತಿದೆ, ಚುನಾವಣೆಯಲ್ಲಿ ಎಷ್ಟೇ ಪೈಪೋಟಿ ಇದ್ದರು ಬಂದ ಫಲಿತಾಂಶವನ್ನು ಎಲ್ಲರು ಸ್ವಾಗತಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯಶಸ್ವಿಗೊಳಿಸಿದ್ದೇವೆ ಎಂದರು.

ಮಾನವ ಸರಪಳಿ ನಿರ್ಮಿಸಿದ ಸಂದರ್ಭದಲ್ಲಿ ಎಲ್ಲರೂ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಸಂಕಲ್ಪ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರಗೊಳಿಸಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಬೇಕು ಎಂದು ಅವರು ಕರೆ ನೀಡಿದರು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಗದಗ ಜಿಲ್ಲೆಯ ಬಾಲೇಹೊಸೂರು ಗ್ರಾಮದಿಂದ ಮುಂಡರಗಿ ಮಾರ್ಗವಾಗಿ ಕೊಪ್ಪಳ ಜಿಲ್ಲೆ ಅಳವಂಡಿ ವರೆಗೆ ಒಟ್ಟು 61 ಕಿ.ಮೀ ಮಾನವ ಸರಪಳಿಯನ್ನು ರಚಿಸಲಾಗಿದ್ದು ಈ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯಿಂದ 1,12,652 ಜನರು ನೊಂದಾಯಿಸಿದಕ್ಕೆ ಗದಗ ಜಿಲ್ಲೆ ನೊಂದಣಿಯಲ್ಲಿ ಮುಂಚುಣಿ ಸ್ಥಾನದಲ್ಲಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೆಮ್ಮೆಯನ್ನು ವ್ಯಕ್ತಪಡಿಸಿದರು.

ಇದೇವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದಿ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಿ ಸ್ಥಳದಲ್ಲಿದ್ದ ಮಾನವ ಸರಪಳಿಯಲ್ಲಿ ಪಾಲ್ಗೊಂಡು ಘೋಷಣೆ ಕೂಗಿ ನಂತರ ಪ್ರವಾಸಿ ಮಂದಿರದಲ್ಲಿ ಗಿಡಗಳನ್ನೂ ನೆಟ್ಟುರು.

ರಾಜ್ಯ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್.ಪಾಟೀಲ ಮಾತನಾಡಿ, ಮಹತ್ವದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಮುಂಡರಗಿ ಪಟ್ಟಣದಲ್ಲಿ ಆಯೋಜಿಸಿ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವದ ಪ್ರಾಮುಖ್ಯತೆ ಸಾರಲು ಪಾಲ್ಗೊಂಡ ಎಲ್ಲರಿಗೂ ಅಭಿನಂದನೆಗಳು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ,ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ ಬಿ ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಹೇಶ ಪೊತದಾರ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಮಾನವೀಯತೆ ಮೆರೆದ ಹೊಳೆಆಲೂರ ಸ್ವಾಭಿಮಾನಿ ಕರವೇ ಕಾರ್ಯಕರ್ತರು  ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶಾತಿಗೆ ಅವಕಾಶ ಗದಗ : ನವೆಂಬರ್ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಗದಗ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರತಿ ಕ್ವಿಂಟಲ್ ಸಾಮಾನ್ಯ ಭತ್ತಕ್ಕೆ ರೂ 2,300 ಬೆಲೆ ನಿಗದಿ ಗದಗ : ಜಿಗಳೂರು ಕೆರೆಯ ನೀರನ್ನು ಸಮರ್ಪಕ ಸರಬರಾಜು, ನಿರ್ವಹಣೆಗೆ ಸೂಚನೆ ಗದಗ : ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ಸಭೆ : ಸಕಾಲ ಅರ್ಜಿಗಳ ವಿಲೇವಾರಿ ತೃಪ್ತಿದಾಯಕವಿರಲಿ ಗದಗ : ಗದಗ ಎಸ್ಪಿ ಬಿ.ಎಸ್. ನೇಮಗೌಡ ಹೆಸರಿನಲ್ಲಿ ಫೇಕ್ ಫೇಸ್‌ಬುಕ್‌ ಐಡಿ ಕ್ರಿಯೆಟ್ ಮಾಡಿ ವಂಚನೆಗೆ ಯತ್ನ  ಗದಗ : ಮೂವರು ಮಕ್ಕಳೊಂದಿಗೆ ತುಂಗಾಭದ್ರಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ! ಪ್ರಕರಣ : ಒಂದು ಮಗುವಿನ ಶವ ಪತ್ತೆ ! ಗದಗ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ : ಕಾರ್ಯಾಚರಣೆ ಚುರುಕುಗೊಳಿಸಲು ಸೂಚನೆ