ಗದಗ ೧೭: ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರದ ಪೂರ್ವಭಾವಿ ಸಭೆಯ ವೇಳೆ ಭೋವಿ ಸಮಾಜದ ಲಕ್ಷ್ಮೇಶ್ವರ ತಾಲೂಕ ಅಧ್ಯಕ್ಷ ರಾಜು ಡಿ ಕಳ್ಳಿ ಅವರನ್ನ ಕರ್ನಾಟಕ ರಾಜ್ಯ ಭೋವಿ (ವಡ್ಡರ) ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಚೌಡಯ್ಯ ರವರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭೋವಿ ಸಮಾಜದ ರಾಜ್ಯ ಉಪಾಧ್ಯಕ್ಷ ಎಂ.ಟಿ. ಮಲ್ಲೇಶ್, ಹೇಮಂತ, ಭೋವಿ ಸಮಾಜದ ಗೌರವಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ರವಿ ಎಲ್ ಗುಂಜೀಕರ, ಗದಗ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಬಳ್ಳಾರಿ, ಭೋವಿ ಸಮಾಜದ ಜಿಲ್ಲಾಧ್ಯಕ್ಷ ಹುಚ್ಚಪ್ಪ ಸಂದಕದ, ಗದಗ-ಬೆಟಗೇರಿ ನಗರಸಭೆ ಸಹಾಯಕ ಅಭಿಯಂತರ ಎಚ್.ಎ. ಬಂಡಿವಡ್ಡರ, ರಾಜಶೇಖರ ದುಮ್ಮವಾಡ ಸೇರಿದಂತೆ ಜಿಲ್ಲೆಯ ಸಮಾಜ ಬಾಂಧವರು ಉಪಸ್ಥಿತರಿದ್ದರು.