Thursday, September 19, 2024
Google search engine
Homeಉದ್ಯೋಗಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ

ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ಸಚಿವ ಎಚ್.ಕೆ.ಪಾಟೀಲ ಚಾಲನೆ

ಗದಗ  ಸೆಪ್ಟೆಂಬರ್ 18: ಪ್ರಜೆಯೇ ನಿಜವಾದ ಪ್ರಭು. ಪ್ರಜೆಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಕಾರ್ಯವಾಗಲಿ. ಅನವಶ್ಯಕ ಅಲೆದಾಟ ತಪ್ಪಿಸುವುದೇ ಜನತಾದರ್ಶನ ಕಾರ್ಯಕ್ರಮದ ಧ್ಯೇಯೋದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಬುಧವಾರ ಜಿಲ್ಲಾಡಳಿತದಿಂದ ಏರ್ಪಡಿಸಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಒಂದು ನಿಮಿಷದ ಕೆಲಸ ಇದ್ದರೂ ಸಹ ಒಂದು ತಿಂಗಳುಗಟ್ಟಲೇ ಅಲೆದಾಡಿಸುವುದು ಜನರಿಗೆ ವಿನಾಕಾರಣ ನೋವು ವಿಳಂಬ ದ್ರೋಹ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರವೃತ್ತಿ ಸಂಪೂರ್ಣವಾಗಿ ನಿಲ್ಲಿಸಬೇಕು. ಜನರ ಸಮೀಪ ತೆರಳಿ ಅವರ ಸಮಸ್ಯೆಗಳನ್ನು ಈಡೇರಿಸುವ ಕೆಲಸವಾಗಬೇಕು ಎಂದರು.
 
ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಕಳೆದ ವರ್ಷ ಸೆಪ್ಟೆಂಬರ್ 30 ರಂದು ಮಾಡಲಾಗಿತ್ತು. ಅಂದು ಸಾರ್ವಜನಿಕರು ಅನೇಕ ತರಹದ ಅಹವಾಲುಗಳನ್ನು ಹೊತ್ತು ಆಗಮಿಸಿ ಒಟ್ಟು 920 ಅರ್ಜಿಗಳನ್ನು ಸಲ್ಲಿಸಿದ್ದರು. ಹಲವಾರು ಅಹವಾಲುಗಳಿಗೆ ಪರಿಹಾರ ಕಂಡುಕೊಳ್ಲಲಾಗಿದೆ. 830 ಅಹವಾಲುಗಳಿಗೆ ತಾರ್ಕಿಕ ಅಂತ್ಯ ನೀಡಲಾಗಿದೆ. ಬಾಕಿ ಉಳಿದ 83 ಅಹವಾಲುಗಳಲ್ಲಿ 40 ಅಹವಾಲುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಉಳಿದ ಅಹವಾಲುಗಳು ವೈಯಕ್ತಿಕ ಹಾಗೂ ಅಪೂರ್ಣ ದಾಖಲೆಗಳನ್ನು ಒಳಗೊಂಡಿವೆ. ಮತ್ತು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿರುವುದರಿಮದ ಪರಿಹಾರ ಪ್ರಯತ್ನ ವಿಳಂಬವಾಗಿದೆ ಎಂದರು.ಅವುಗಳ ಪರಿಹಾರಕ್ಕೂ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದರು.
ಇದು ಎರಡನೇ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮವಾಗಿದ್ದು ಕಾರ್ಯಶೈಲಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಜನಸಾಮಾನ್ಯರಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿತ್ತು. ಗದಗ ತಾಲೂಕಿನ 44 ಅಹವಾಲು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 116 ಅಹವಾಲುಗಳು ನೊಂದಣಿಯಾಗಿವೆ. ಅಲ್ಲದೇ ನೇರವಾಗಿಯೂ ಜನತಾದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಿರಿಯ ಅಧಿಕಾರಿಗಳು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಪ್ರಯತ್ನಿಸಲಿದ್ದಾರೆ ಎಂದು ತಿಳಿಸಿದರು.
 

AA

ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಗದಗ ತಾಲೂಕು ಕಚೇರಿಯಲ್ಲಿರುವ ಬಾಕಿ ಇರುವ ಅರ್ಜಿಗಳ ವಿಚಾರಣೆ ಕೈಗೊಳ್ಳುವ ಮೂಲಕ ಪರಿಹಾರಕ್ಕೆ ಯತ್ನಿಸಲಾಗುವುದು. ಜೊತೆಗೆ ಜಿಲ್ಲೆಯ ಇನ್ನೊಂದು ತಾಲೂಕು ಕಚೇರಿಯಲ್ಲಿ ಬಾಕಿ ಇರುವ ಅರ್ಜಿಗಳಿಗೂ ಸಹ ಈ ಕಾರ್ಯಕ್ರಮದಲ್ಲಿಯೇ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

 
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನತಾದರ್ಶನ ಕಾರ್ಯಕ್ರಮದ ಬಗ್ಗೆ ವಿಶೇಷ ಗಮನಹರಿಸುತ್ತಾರೆ. ಜಿಲ್ಲೆಗಳಲ್ಲಿ ಜರುಗುವ ಜನತಾದರ್ಶನ ಕಾರ್ಯಕ್ರಮದಲ್ಲಿ ಸ್ವೀಕೃತಿಯಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವ ಮೂಲಕ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಉತ್ಸುಕರಾಗಿದ್ದಾರೆ ಎಂದು ನುಡಿದರು.
ಸರ್ಕಾರ ಜಾರಿಗೊಳಿಸಿದ ಪಂಚಗ್ಯಾರAಟಿಗಳು ರಾಜ್ಯದಲ್ಲಿಯೇ ಗದಗ ಜಿಲ್ಲೆ ಅನುಷ್ಟಾನದಲ್ಲಿ ಮುಂಚೂಣಿಯಲ್ಲಿದೆ. ಶೇ 99.2 ರಷ್ಟು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮೂಲಕ ಸಾಧನೆ ಮಾಡಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ.ಪಾಟೀಲ ಹೇಳಿದರು.
 
ರಾಜ್ಯ ಖನಿಜ ನಿಗಮದ ಅಧ್ಯಕ್ಷರೂ ಆಗಿರುವ ರೋಣ ಶಾಸಕ ಜಿ.ಎಸ್.ಪಾಟೀಲ ಅವರು ಮಾತನಾಡಿ ಜನತಾ ದರ್ಶನ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವೇದಿಕೆಯಾಗಿದೆ. ವಿನಾಕಾರಣ ವಿಳಂಭಧೋರಣೆ ತಪ್ಪಿಸುವ ಮೂಲಕ ತುರ್ತಾಗಿ ಜನರ ಕಷ್ಟಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸುವುದಾಗಿದೆ. ಇದರ ಸಂಪೂರ್ಣ ಸದುಪಯೋಗವನ್ನು ಜಿಲ್ಲೆಯ ಜನತೆ ಪಡೆಯಬೇಕೆಂದರು.
ವೇದಿಕೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ , ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಬಿ.ಬಿ.ಅಸೂಟಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ. ಸಂಕದ ಇದ್ದರು.
 
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಅವರು ಅತಿಥಿಗಳನ್ನು ಸ್ವಾಗತಿಸಿದರು. ಉಪವಿಭಾಗಾಧಿಕಾರಿ ಗಂಗಪ್ಪ ಎಂ ವಂದಿಸಿದರು. ದತ್ತ ಪ್ರಸನ್ನ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯುತ್ ನಿಲುಗಡೆ ಗದಗ : ಪ್ರಜೆಗಳೇ ಪ್ರಭುಗಳು, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡಿ : ಸಚಿವ ಎಚ್.ಕೆ.ಪಾಟೀಲ ಗದಗ : ಜನರ ಆರೋಗ್ಯ ಕಾಪಾಡಲು ಸ್ವಚ್ಚತೆ ನಮ್ಮ ಮೊದಲ ಕರ್ತವ್ಯ : ಕೀರ್ತಿ, ಪಾಟೀಲ್ ರೋಣ : ಗ್ರಾಮ ಸುಂದರವಾಗಿ ಕಾಣಲು ಸ್ವಚ್ಚತೆ ಮೊದಲ ಆದ್ಯತೆ ಆಗಿರಲಿ : ತಾಪಂ ಇಓ ಮಂಜುಳಾ ಹಕಾರಿ.. ಗದಗ : ಸಾಮಾನ್ಯ/ ವಿಶೇಷ ಸಭೆಯಲ್ಲಿನ ಠರಾವು ಪುಸ್ತಕದ ಪ್ರತಿ ಎನ್.ಐ.ಸಿ.ವೆಬ್‌ಸೈಟಿನಲ್ಲಿ ಅಪಲೋಡ್ ಮಾಡುವುದು ಕಡ್ಡಾಯ ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಭೋವಿ ಸಮಾಜದ ತಾಲೂಕ ಅಧ್ಯಕ್ಷ ರಾಜು ಕಳ್ಳಿ ಅವರಿಗೆ ಸನ್ಮಾನ ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು