ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ
ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಗದಗ ಸೆಪ್ಟೆಂಬರ್ 20: 2024-25ನೇ ಸಾಲಿನಲ್ಲಿ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೊರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಎಸ್‌ಎಚ್‌ಪಿ (ಸ್ಟೇಟ್ ಹಾಸ್ಟೆಲ್ ಪೋರ್ಟಲ್) ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ, ಪೋಷಕರು/ವಿದ್ಯಾರ್ಥಿಗಳು ವೆಬ್‌ಸೈಟ್ ವಿಳಾಸ https;//shp.karnataka.gov.in ಮೂಲಕ ಅಕ್ಟೋಬರ್ 5 ರೊಳಗಾಗಿ ಆಲ್‌ಲೈನ್ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬAಧಿಸಿದ ವಸತಿ ನಿಲಯಗಳಿಗೆ ನೀಡಲು ತಿಳಿಸಿದೆ. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿ/ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಹತ್ತಿರದ ವಸತಿ ನಿಲಯಗಳಿಗೆ ಭೇಟಿ ನೀಡಿ ಸಂಪರ್ಕಿಸಬಹುದಾಗಿದೆ.
ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ : ಅರ್ಜಿ ಆಹ್ವಾನ
ಗದಗ 20: ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ಒಂದು ವರ್ಷ ಅವಧಿಯ ಪೋಸ್ಟ್ ಡಿಪ್ಲೊಮಾ ಇನ್ ಮೆಕೆ ಟ್ರಾನಿಕ್ಸ್ ವೃತ್ತಿ ತರಬೇತಿಯ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕಲ್, ಅಟೊಮೊಬೈಲ್, ಎಲೆಕ್ಟಿçಕಲ್, ಮೆಕೆಟ್ರಾನಿಕ್ಸ್ ಮತ್ತು ಎಲೆಕ್ಟಾçನಿಕ್ಸ್ ವಿಷಯಗಳಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿAಗ್ (ಬಿ.ಇ) ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿ ಪಡೆಯಲು ಅರ್ಹರಿರುತ್ತಾರೆ.
ಒಂದು ವರ್ಷ ಅವಧಿಯ ಈ ಕೋರ್ಸ್ನಲ್ಲಿ ಎಲೆಕ್ಟಿçಕಲ್ ಇನ್‌ಸ್ಟಾಲೇಶನ್, ಎಲೆಕ್ಟಿçಕಲ್ ಪ್ಯಾನೆಲ್ ಡಿಸೈನ್, ಮೆಕ್ಯಾನಿಕಲ್ ಆಂಡ್ ಸಿಸ್ಟೆಮ್ ಡಿಸೈನ್, ಪಿಎಲ್‌ಸಿ, ಸ್ಕಾಡಾ, ಅಟೊಮೇಶನ್, ಸಿಎನ್‌ಸಿ ಮೈಂಟೇನನ್ಸ್, ಇಂಟರ್ನೆಟ್‌ಆಫ್‌ಥಿAಗ್ಸ್ (ಐಓಟಿ), ರೋಬೋಟಿಕ್ಸ್ ಮತ್ತು ಪ್ರೊಜೆಕ್ಟ್ ಡೆವಲಪ್‌ಮೆಂಟ್ ವಿಷಯಗಳಲ್ಲಿ ಪರಿಣಿತಿ ಹೊಂದುವಷ್ಟು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ತರಬೇತಿಯ ಕೊನೆಯಲ್ಲಿ ಕ್ಯಾಂಪಸ್ ಸಂದರ್ಶನಗಳ ಮೂಲಕ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ಮೂಲ ಸೌಕರ್ಯಗಳನ್ನು ಅಳವಡಿಸಿಕೊಂಡಿದ್ದು ವೃತ್ತಿಪರ ತರಬೇತಿಗಳಿಗೆ ಹೆಸರುವಾಸಿಯಾಗಿದೆ.
ಪೋಸ್ ್ಟ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್ ತರಬೇತಿಯು ಅಕ್ಟೋಬರ್ 01 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 30 ರೊಳಗಾಗಿ ಪ್ರವೇಶ ಪಡೆದುಕೊಳ್ಳಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ, ಇಂಡಸ್ಟಿçಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ ದೂರವಾಣಿ ಸಂ. 8183860552 / 0836-2333159/155267 ಸಂಪರ್ಕಿಸಬಹುದಾಗಿದೆ ಎಂದು ಹುಬ್ಬಳ್ಳಿ ಜಿಟಿಟಿಸಿ ಪ್ರಿನ್ಸಿಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ
ಗದಗ ಸೆಪ್ಟೆಂಬರ್ 20: 2024-25ನೇ ಸಾಲಿನಲ್ಲಿ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೊರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಎಸ್,ಎಚ್,ಪಿ ( ಸ್ಟೇಟ್ ಹಾಸ್ಟೆಲ್ ಪೋರ್ಟಲ್ ) ಆನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಪೋಷಕರು/ವಿದ್ಯಾರ್ಥಿಗಳು ವೆಬ್‌ಸೈಟ್ ವಿಳಾಸ https://shp.karnataka.gov.in ಮೂಲಕ ಅಕ್ಟೊಬರ್ 5 ರೊಳಗಾಗಿ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬAಧಿಸಿದ ವಸತಿ ನಿಲಯಗಳಿಗೆ ಸಲ್ಲಿಸಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವಧಿ ವಿಸ್ತರಣೆ
ಗದಗ : 20: 2024-25 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆ ಮಾರಿ/ ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಅರ್ಹ ಪಿಯುಸಿ ಸಮಾನಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೊರ್ಸುಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ , ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.