ಗದಗ ಸೆಪ್ಟೆಂಬರ 24; ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಶ್ರೀ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು ಗಣೇಶ ಮೂರ್ತಿಗಳನ್ನು ಆಯಾ ಸಂಘಟಿಕರು, ಸಾರ್ವಜನಿಕರು ಮೆರವಣಿಗೆ ಮೂಲಕ ಸ್ಥಳೀಯ ಆಡಳಿತ ನಿಗದಿಪಡಿಸಿದ ಸ್ಥಳದಲ್ಲಿ ವಿಸರ್ಜನೆ ಕಾರ್ಯಕ್ರಮಗಳು ಜರುಗುತ್ತವೆ. ಈ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶ ಮೂತಿಗಳ 19,23 ನೇ ದಿನಗಳ ವಿಸರ್ಜನೆ ಸಮಯದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಸಾಗಾಟ ಮತ್ತು ಮದ್ಯ ಮಾರಾಟ ಈ ಕೆಳಗಿನಂತೆ ನಿಷೇಧಿಸಲಾಗಿದೆ.
19 ನೇ ದಿನವಾದ ಸೆ.25 ರಂದು ಬೆ 6 ಗಂಟೆಯಿಂದ ಸೆ.26 ರ ಬೆ 6 ಗಂಟೆಯವರೆಗೆ ಮತ್ತು 23 ನೇ ದಿನವಾದ ಸೆ.29 ರ ಬೆ 6 ಗಂಟೆಯಿAದ ಸೆ.30 ರ ಬೆ 6 ಗಂಟೆಯವರೆಗೆ ಲಕ್ಷ್ಮೇಶ್ವರ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಟ ನಿಷೇಧಿಸಲಾಗಿದೆ.
ಮೇಲ್ಕಾಣಿಸಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸದರ ದಿನಗಳಂದು ಬಾರುಗಳು, ಕ್ಲಬ್ಬುಗಳು, ಬಿಯರ್ , ಭಾರತೀಯ ತಯಾರಿಕೆಯ ಮದ್ಯದ ಅಂಗಡಿಗಳನ್ನು ಮುಚ್ಚತಕ್ಕದ್ದು. ಅಲ್ಲದೇ ಪರಿಸ್ಥಿತಿಗೆ ಅನುಗುಣವಾಗಿ ಸಾರ್ವಜನಿಕ ಶಾಂತತೆಯನ್ನು ಕಾಯ್ದುಕೊಳ್ಲುವ ದೃಷ್ಟಿಯಿಂದ ವಲಯ ಅಬಕಾರಿ ಇನ್ಸ್ ಪೆಕ್ಟರ್ ಹಾಗೂ ಅಬಕಾರಿ ಉಪ ಆಯುಕ್ತರು, ಕನಾಟಕ ಅಬಕಾರಿ ಕಾಯ್ದೆ ಯನ್ವರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.