20.4 C
New York
Tuesday, September 16, 2025

Buy now

spot_img

ಗದಗ : ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0ಕ್ಕೆ ಚಾಲನೆ

ಗದಗ ಸೆಪ್ಟೆಂಬರ್ 25 : ಜಿಲ್ಲೆಯಲ್ಲಿ ತಂಬಾಕುಮುಕ್ತ ಯುವ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು. ಈ ನಿಟ್ಟಿನಲ್ಲಿ ಇನ್ನೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.

ಪ್ರಸಕ್ತ ವರ್ಷ ಸಪ್ಟಂಬರ್ 24 ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ತಂಬಾಕು ಮುಕ್ತ ಯುವ ಅಭಿಯಾನ 2.0 ರಾಷ್ಟಿçÃಯ ಅಭಿಯಾನಕ್ಕೆ ಚಾಲನೆ ನೀಡಿದ್ದು, ಗದಗ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕ್ಕೆ ಜಿಲ್ಲಾಧಿಕಾರಿಗಳು ಬುಧವಾರ ಜಿಲ್ಲಾಡಳಿತ ಭವನದಲ್ಲಿ ಚಾಲನೆ ನೀಡಿ ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಂಬಾಕು ನಿಯಂತ್ರಣ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಕೋಟ್ಪಾ ದಾಳಿಗಳನ್ನು ಹಮ್ಮಿಕೊಳ್ಳಬೇಕು. ತಂಬಾಕು ಮುಕ್ತ ಗ್ರಾಮ ಮತ್ತು ತಂಬಾಕು ಮುಕ್ತ ಶಾಲೆ/ಕಾಲೇಜು ಘೋಷಣೆಗೆ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಯ ಮುಖ್ಯಸ್ಥರು ಕರ‍್ಯೋನ್ಮುಖರಾಗಬೇಕು. ಶಾಲಾ ಕಾಲೇಜುಗಳ ಒಳಾವರಣ ಮತ್ತು ಹೊರಗಡೆ ತಂಬಾಕು ಮಾರಾಟ ನಿಷೇಧದ ಕುರಿತು ಗೋಡೆ ಬರಹ ಬರೆಸಬೇಕು. ತಾಲೂಕಾ ಮಟ್ಟದಲ್ಲಿಯೂ ಸಹ ಈ ಕುರಿತು ಸಭೆ ಜರುಗಿಸಬೇಕು. ಬಸ್‌ಸ್ಟಾö್ಯಂಡ್ ಹಾಗೂ ಶಾಲಾ ಕಾಲೇಜುಗಳ ಪಕ್ಕದಲ್ಲಿ ತಂಬಾಕು ಮಾರಾಟ ಮಾಡದ ಹಾಗೆ ನೋಡಿಕೊಳ್ಳಬೇಕೆಂದು ಸೂಚಿಸಿದರು.

ಜಿಲ್ಲಾ ಸಮೀಕ್ಷಣಾಧಿಕಾರಿ ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮಾಧಿಕಾರಿಗಳಾದ ಡಾ.ವೆಂಕಟೇಶ ರಾಥೋಡ್ ಅವರು ಮಾತನಾಡಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಗದಗದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳ ಕುರಿತು ವಿವರಿಸುತ್ತಾ ಜಿಲ್ಲೆಯಲ್ಲಿ ಕಳೆದ ವರ್ಷ ಒಟ್ಟು 35 ಶಾಲಾ/ಕಾಲೇಜುಗಳಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಾಲಾ, ಕಾಲೇಜುಗಳ ಮುಖ್ಯಸ್ಥರ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚನೆ ಮಾಡಲಾಗಿದೆ. ಕೋಟ್ಪಾ ದಾಳಿ ಹಮ್ಮಿಕೊಳ್ಳುವುದರ ಮೂಲಕ ವ್ಯಾಪಾರಸ್ಥರು, ತಂಬಾಕು ಬಳಕೆದಾರರಿಗೆ ಹಾಗೂ ಸಾರ್ವಜನಿಕರಲ್ಲಿ ಕೋಟ್ಪಾ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಗಿದೆ ಹಾಗೂ ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಂಡು ಈವರೆಗೆ 29 ಕೋಟ್ಪಾ ದಾಳಿ ನಡೆಸಿ 569 ಪ್ರಕರಣಗಳನ್ನು ದಾಖಲಿಸಿ ರೂ.90600/-ದಂಡ ಸಂಗ್ರಹಿಸಲಾಗಿದೆ.ಕೋಟ್ಪಾ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾ ತಂಬಾಕು ವ್ಯಸನ ಮುಕ್ತ ಕೇಂದ್ರದ ಮೂಲಕ ಈ ವರ್ಷ ಒಟ್ಟು 1749 ಅರ್ಥಿಗಳಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ.ಅದೇ ರೀತಿ ಸಮುದಾಯ ಮಟ್ಟದಲ್ಲಿ ಕೇಂದ್ರೀಕೃತ ಗುಂಪು ಚರ್ಚೆಯ ಮೂಲಕ ಒಟ್ಟು 25 ಎಫ್.ಜಿ.ಡಿ. ಕಾರ್ಯಕ್ರಮ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳ ಪೌರಕಾರ್ಮಿಕರಿಗೆ ತಂಬಾಕು ಬಳಕೆಯಿಂದಾಗುವ ದುಷ್ಪರಿಣಾಮ ಹಾಗೂ ಬಾಯಿಕ್ಯಾನ್ಸರ್ ತಪಾಸಣೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ.ಬಿ.ಸAಕದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಎಸ್.ನೀಲಗುಂದ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಮೀನಾಕ್ಷಿ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಬಿ.ಸಿ.ಕರಿಗೌಡ್ರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಗೋಪಾಲ ಸುರಪುರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಸಮಿತಿಯ ಸದಸ್ಯರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ