Sunday, November 10, 2024
Google search engine
Homeಗದಗಗಜೇಂದ್ರಗಡಗದಗ : ಸಾರ್ವಜನಿಕರು ಇ- ಆಸ್ತಿ ಸಂಯೋಜನೆಯ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿಗಳು ಕರೆ

ಗದಗ : ಸಾರ್ವಜನಿಕರು ಇ- ಆಸ್ತಿ ಸಂಯೋಜನೆಯ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿಗಳು ಕರೆ

ಗದಗ  ಸೆಪ್ಟೆಂಬರ್ 30: ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೊಜನೆ ಮಾಡಲಾಗಿರುತ್ತದೆ. ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ದಿನಾಂಕ 05-10-2016 ರಿಂದ ಸಂಯೋಜನೆ ಮಾಡಲಾಗಿದೆ ಹಾಗೂ ಗ್ರಾಮಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ದಿನಾಂಕ 18-07-2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

ಈ ಮೇಲೆ ಕಾಣಿಸಿದ ಆಸ್ತಿಗಳನ್ನು ಹೊರತುಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ (ತಂತ್ರಾಂಶ) ವನ್ನು ರೂಪಿಸಿದ್ದು ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:29-01-2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

 ನಗರಾಭಿವೃದ್ಧಿ ಇಲಾಖೆಯು ಗದಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ. ಗದಗ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿನಾಂಕ: 23-09-2024 ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶದ ಮೂಲಕ ಆದೇಶಿಸಲಾಗಿದೆ. ದಿನಾಂಕ: 7-10-2024 ರಿಂದ ಗದಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಈ ಕೆಳಕಂಡ ಉಪಯೋಗಗಳಾಗುತ್ತದೆ.

ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜಮಾಲೀಕರನ್ನು ಗುರುತಿಸಲು ಸಾಧ್ಯ.

ನೈಜಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು.

ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಗದಗ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಮಾನವೀಯತೆ ಮೆರೆದ ಹೊಳೆಆಲೂರ ಸ್ವಾಭಿಮಾನಿ ಕರವೇ ಕಾರ್ಯಕರ್ತರು  ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಪ್ರವೇಶಾತಿಗೆ ಅವಕಾಶ ಗದಗ : ನವೆಂಬರ್ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕ ಅಹವಾಲು ಸ್ವೀಕಾರ ಗದಗ : ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರತಿ ಕ್ವಿಂಟಲ್ ಸಾಮಾನ್ಯ ಭತ್ತಕ್ಕೆ ರೂ 2,300 ಬೆಲೆ ನಿಗದಿ ಗದಗ : ಜಿಗಳೂರು ಕೆರೆಯ ನೀರನ್ನು ಸಮರ್ಪಕ ಸರಬರಾಜು, ನಿರ್ವಹಣೆಗೆ ಸೂಚನೆ ಗದಗ : ಸಕಾಲ ಯೋಜನೆಯ ಪ್ರಗತಿ ಪರಿಶೀಲನೆ ಸಭೆ : ಸಕಾಲ ಅರ್ಜಿಗಳ ವಿಲೇವಾರಿ ತೃಪ್ತಿದಾಯಕವಿರಲಿ ಗದಗ : ಗದಗ ಎಸ್ಪಿ ಬಿ.ಎಸ್. ನೇಮಗೌಡ ಹೆಸರಿನಲ್ಲಿ ಫೇಕ್ ಫೇಸ್‌ಬುಕ್‌ ಐಡಿ ಕ್ರಿಯೆಟ್ ಮಾಡಿ ವಂಚನೆಗೆ ಯತ್ನ  ಗದಗ : ಮೂವರು ಮಕ್ಕಳೊಂದಿಗೆ ತುಂಗಾಭದ್ರಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ! ಪ್ರಕರಣ : ಒಂದು ಮಗುವಿನ ಶವ ಪತ್ತೆ ! ಗದಗ : ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ : ಕಾರ್ಯಾಚರಣೆ ಚುರುಕುಗೊಳಿಸಲು ಸೂಚನೆ