ಗದಗ : ಇತ್ತೀಚೆಗೆ ಗದಗ ಜಿಲ್ಲೆಯಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕರ ವಿಭಾಗದ ಚೆಸ್ ಮತ್ತು ಬ್ಯಾಡ್ಮಿಂಟನ್ 2 ರಲ್ಲೂ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಅಭಿ ಮಲ್ಲಪ್ಪ ತಳವಾರ ಪ್ರಥಮ ಸ್ಥಾನ ಪಡೆದಿದ್ದಾನೆ.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಶೈಕ್ಷಣಿಕ ವರ್ಷದ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು… ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಈ ಮೂಲಕ ಅ. 20 ರಂದು ಹಾಸನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಈ ವಿದ್ಯಾರ್ಥಿ ಗದಗ ಜಿಲ್ಲೆಯನ್ನು ಪ್ರತಿನಿಧಿಸಲ್ಲಿದ್ದಾನೆ.
ಅಭಿ ಮಲ್ಲಪ್ಪ ತಳವಾರ ಗದಗ ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಮಲ್ಲಪ್ಪ ಮತ್ತು ಶ್ರೀದೇವಿ ದಂಪತಿ ಪುತ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಆಗಿದ್ದಾನೆ