ಗದಗ ಅಕ್ಟೋಬರ್ 4: ರಾಜ್ಯದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಅಕ್ಟೋಬರ್ 5 ರಂದು ಸಂಜೆ 6.30 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿಗೆ ಆಗಮಿಸುವರು. ಅಂದು ಸಂಜೆ 7 ಗಂಟೆಗೆ ಅಬ್ಬಿಗೇರಿಯಲ್ಲಿ ಶರನ್ನವರಾತ್ರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ರಾತ್ರಿ 8.30 ಗಂಟೆಗೆ ಅಬ್ಬಿಗೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.