ಗದಗ ೦೪ : ರಾಜ್ಯ ಮಟ್ಟದ ಪ್ರತಿಭಾನ್ವಿತ ಭೋವಿ ಸಮಾಜದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮತ್ತು ಸಮಸ್ತ ಕುಲಬಾಂಧವರು ಅಕ್ಟೋಬರ್-೦೬ ರಂದು ಗದಗ ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ಪ್ರತಿಭಾ ಪುರಸ್ಕಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸರಕಾರಿ ನೌಕರರ ಸಂಘದ ಗದಗ ಜಿಲ್ಲಾಧ್ಯಕ್ಷರು ಹಾಗೂ ಭೋವಿ ಸಮಾಜದ ಗೌರವಾಧ್ಯಕ್ಷರು ಆದ ರವಿ ಎಲ್ ಗುಂಜೀಕರರವರು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಭೋವಿ ಸಮಾಜದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಹಮ್ಮಿಕೊಂಡಿದ್ದು, ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಪಿ ಎಚ್ ಡಿಯಲ್ಲಿ ಶೇ.೮೫% ಕ್ಕಿಂತ ಅಧಿಕ ಅಂಕ ಪಡೆದ ಪ್ರÀ್ರತಿಭಾನ್ವಿತ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಲು ಈಗಾಗಲೇ ಸೂಚಿಸಿದ್ದು ಇರುತ್ತದೆ. ಆದರೆ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಅಕ್ಟೋಬರ್-೦೬, ೨೦೨೪ ರಂದು ನಡೆಯುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ನೇರವಾಗಿ ಬಂದು ತಮ್ಮ ಶಾಲಾ ಅಂಕಪಟ್ಟಿ, ಜಾತಿ ಪ್ರಮಾಣಪತ್ರ ನಕಲು, ೨ ಪಾಸ್ ಪೋರ್ಟ ಅಳತೆಯ ಭಾವಚಿತ್ರವನ್ನು ಒದಗಿಸಿ ಸನ್ಮಾನಿತರಾಗಲು ರವಿ ಎಲ್ ಗುಂಜೀಕರ ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ಪರಮಪೂಜ್ಯ ಶ್ರೀ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಮಹಾ ಸಂಸ್ಥಾನಮಠ ಚಿತ್ರದುರ್ಗ ಮತ್ತು ಬಾಗಲಕೋಟ ವಹಿಸುವರು, ಕಾನೂನು, ನ್ಯಾಯ ಹಾಗೂ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಉದ್ಘಾಟನೆ ಮಾಡುವರು, ಅಧ್ಯಕ್ಷತೆ ಎಸ್. ಎಲ್. ಗಂಗಾಧರಪ್ಪ ಆಯ್.ಎ.ಎಸ್. ನಿವೃತ್ತ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಮಾನ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಭೋವಿ ವಡ್ಡರ ಸಂಘ ಬೆಂಗಳೂರು. ರಾಜ್ಯ ಮಟ್ಟದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಚೆಕ್ ವಿತರಣೆಯನ್ನ ಶಿವರಾಜ ಎಸ್. ತಂಗಡಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಮಟ್ಟದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಗೌರವಧನ ವಿತರಣೆಯನ್ನ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರು (ಲೋಕಸಭೆ) ಹಾವೇರಿ, ಭೋವಿ ಸಮಾಜದ ಗ್ರಾಮ ಪಂಚಾಯತಿ ಅಧ್ಯಕ್ಷರು / ಉಪಾಧ್ಯಕ್ಷರು/ಸದಸ್ಯರುಗಳಿಗೆ ಸನ್ಮಾನವನ್ನು ಜಿ. ಎಸ್. ಪಾಟೀಲ ಅಧ್ಯಕ್ಷರು, ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಹಾಗೂ ಶಾಸಕರು (ವಿಧಾನಸಭೆ) ರೋಣ, ಗದಗ ಜಿಲ್ಲೆ ಭೋವಿ ಸಮಾಜದ ಪಿ.ಎಚ್.ಡಿ. ಪದವಿ ಪಡೆದವರಿಗೆ ಸನ್ಮಾನವನ್ನು ನರಗುಂದ ಶಾಸಕರಾದ ಸಿ. ಸಿ. ಪಾಟೀಲ,
ಗದಗ ಜಿಲ್ಲೆ ಭೋವಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನವನ್ನ ಎಸ್. ರವಿಕುಮಾರ ಅಧ್ಯಕ್ಷರು, ಭೋವಿ ಅಭಿವೃದ್ಧಿ ನಿಗಮ ಬೆಂಗಳೂರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜರುಗುವುದಾಗಿ ತಿಳಿಸಿದರು.
ಪತ್ರಿಕಾ ಗೋಷ್ಠಿ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಗದಗ ತಾಲೂಕ ಅಧಿಕಾರಿ ಹಾಗೂ ಭೋವಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ವೆಂಕಪ್ಪ ಬಳ್ಳಾರಿ, ಭೋವಿ ಸಮಾಜದ ಗದಗ ಜಿಲ್ಲಾಧ್ಯಕ್ಷ ಹುಚ್ಚಪ್ಪ ವಾಯ್ ಸಂದಕದ, ಅಸುಂಡಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಬಸವರಾಜ ಗದಗಿನ, ರಮೇಶ ಮ್ಯಾಗೇರಿ ಸೇರಿದಂತೆ ಸಮಾಜದ ಮುಖಂಡರು, ಯುವಕರು ಭಾಗಿಯಾಗಿದ್ದರು.