ಅರ್ಜಿ ಆಹ್ವಾನ
ಗದಗ ಅಕ್ಟೋಬರ್ 5 : 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯ ವಿಚಾರಗೋಷ್ಠಿ, ಕ್ಷೇತ್ರೋತ್ಸವ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮಅಡಿ ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶದ 18 ರಿಂದ 40 ವಯಸ್ಸಿನ 48 ಜನ ಮಹಿಳಾ ಕುಶಲಕರ್ಮಿಗಳಿಗೆ ಒಟ್ಟು 5 ದಿನಗಳ ಕಾಲ (ಊಟ ಮತ್ತು ವಸತಿ ಹಾಗೂ ಪ್ರಯಾಣ ವೆಚ್ಚ) ಉಚಿತವಾಗಿ ಕೈಗಾರಿಕಾ ಅಧ್ಯಯನ ಪ್ರವಾಸವಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳಾ ಕುಶಲಕರ್ಮಿಗಳು ಅಕ್ಟೋಬರ್ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಯ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗವನ್ನು ಸಂರ್ಪಕಿಸಬಹುದಾಗಿದೆ ಎಂದು ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಗದಗ ಅಕ್ಟೋಬರ್ 5 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ಆರ್ಥಿಕ ಅಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಎಲ್ಲ ನಿಗಮಗಳಿಂದ 2024-25 ನೇ ಸಾಲಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೊಜನೆ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೊ ಕ್ರೆಡಿಟ್ ( ಪ್ರೇರಣಾ ) ಯೊಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.