Sunday, March 23, 2025
Google search engine
Homeಉದ್ಯೋಗಗದಗ : ಬಡಜನರು ಆರ್ಥಿಕ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು : ಸಂಸದ ಬಸವರಾಜ...

ಗದಗ : ಬಡಜನರು ಆರ್ಥಿಕ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು : ಸಂಸದ ಬಸವರಾಜ ಬೊಮ್ಮಾಯಿ

ಗದಗ  ಅಕ್ಟೊಬರ್ 7: ಬಡಜನರು ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್‌ಗಳು ಸಹಕಾರಿಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜರುಗಿದ ಲೀಡ ಬ್ಯಾಂಕ್‌ನ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಬ್ಯಾಂಕ್‌ಗಳ ಮುಖಾಂತರ ನಿಗದಿತ ಕಾಲಮಿತಿಯಲ್ಲಿಯೇ ದೊರಕಿಸಿದರೆ ಫಲಾನುಭವಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಬಡಜನರು ಹಾಗೂ ಯುವಕರು ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ನವರ ಸರಿಯಾದ ಮಾರ್ಗದರ್ಶನ ಹಾಗೂ ಸಹಕಾರ ಅಗತ್ಯವಾಗಿದೆ. ಬ್ಯಾಂಕ್ ಗಳ ವಿಶ್ವಾಸಾರ್ಹತೆ ಹೆಚ್ಚಾಗುವ ರೀತಿಯಲ್ಲಿ ಬ್ಯಾಂಕ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ನಡೆದುಕೊಳ್ಳಬೇಕು. ಗದಗ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ರೈತರಿಗೆ ಸಾಲ ನೀಡುವಾಗ ವಿನಾ ಕಾರಣ ವಿಳಂಬ ಮಾಡಬಾರದು. ಜಿಲ್ಲೆಯಲ್ಲಿ ಕೈಮಗ್ಗ ಮತ್ತು ಜವಳಿ ಉದ್ದಿಮೆಗಳಿಗೆ ಹೆಚ್ಚು ಪ್ರೊತ್ಸಾಹಿಸಬೇಕು. ಕೈಮಗ್ಗದ ಉದ್ದಿಮೆದಾರರ ಸಭೆ ಕೈಗೊಂಡು ಕೈಮಗ್ಗ ಮತ್ತು ಜವಳಿ ಉದ್ದಿಮೆಗಳ ಪರಿಣಾಮಕಾರಿ ಅಭಿವೃದ್ಧಿಗಾಗಿ ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಬೇಕು. ಬ್ಯಾಂಕ್ ನವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಿದರೆ ಯೊಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.

 ಲೀಡ್ ಬ್ಯಾಂಕ್ ಮ್ಯಾನೇಜರ್ ಸಂತೋಷ್ ಎಂ.ವಿ ಅವರು ಮಾತನಾಡಿ ಜಿಲ್ಲೆಯಲ್ಲಿ ಲೀಡ್ ಬ್ಯಾಂಕ್‌ನ 182 ಶಾಖೆಗಳು ಕರ‍್ಯನಿರ್ವಹಿಸುತ್ತಿವೆ. ಹೆಚ್‌ಡಿಎಫ್‌ಸಿಯ ಹೊಸ ಶಾಖೆಗಳು ಜಿಲ್ಲೆಯ ಗಜೇಂದ್ರಗಡ, ಲಕ್ಷೆö್ಮÃಶ್ವರ , ಮುಂಡರಗಿ ಹಾಗು ನರಗುಂದದಲ್ಲಿ ತೆರೆಯಲಾಗಿದೆ. ಜಿಲ್ಲೆಯ ಸಾಲ ಠೇವಣಿ ಅನುಪಾತ 95.94 % ಆಗಿರುತ್ತದೆ. ಎಲ್ಲ ಬ್ಯಾಂಕಿನ ನಿಯಂತ್ರಣಾಧಿಕಾರಿಗಳು ಸಾಲ ಠೇವಣಿ ಅನುಪಾತವನ್ನು ಸುಧಾರಿಸಲು ಶಾಖೆಗಳಿಗೆ ನಿರ್ದೇಶನ ನೀಡಲಾಗಿದೆ.

 ಜಿಲ್ಲೆಯಲ್ಲಿ ಪ್ರಸಕ್ತ ವಾರ್ಷಿಕ ಸಾಲ ಯೋಜನೆಯಡಿ 30-6-2024 ರವರೆಗೆ ಕೃಷಿ ಸೇರಿದಂತೆ ಆದ್ಯತಾ ವಲಯಕ್ಕೆ 120832.31 ಲಕ್ಷ ರೂ. ಸಾಲ ನೀಡಿಕೆಯಾಗಿದೆ. ತಾಲೂಕಾವಾರು ವಿವರ ಇಂತಿದೆ (ಲಕ್ಷ ಗಳಲ್ಲಿ) ಗದಗ –55973.08, ಗಜೇಂದ್ರಗಡ-5934.98, ಲಕ್ಷೆö್ಮÃಶ್ವರ– 5984.74, ಮುಂಡರಗಿ- 9553.72, ನರಗುಂದ-15252.8, ರೋಣ-19416.65, ಶಿರಹಟ್ಟಿ- 8716.34 ಸಾಲ ನೀಡಿಕೆಯಾಗಿದೆ .

ಜಿಲ್ಲೆಯಲ್ಲಿ 2024 ರ ಜೂನ್ ಅಂತ್ಯದವರೆಗೆ ಮುದ್ರಾ ಸಾಲ ಯೋಜನೆಯಡಿ ಶಿಶು ಯೋಜನೆಯಲ್ಲಿ 50116 ಅರ್ಜಿಗಳು ಸ್ವೀಕರಿಸಿ 10936.72 ಲಕ್ಷ ರೂ, ಕಿಶೋರ ಯೋಜನೆಯಡಿ 34032 ಅರ್ಜಿಗಳು ಸ್ವೀಕರಿಸಿ 33850.85 ಲಕ್ಷ ರೂ. ಹಾಗೂ ತರುಣ ಯೋಜನೆಯಡಿ 1532 ಅರ್ಜಿಗಳನ್ನು ಸ್ವೀಕರಿಸಿ 9395.20 ಲಕ್ಷ ರೂ. ವಿತರಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಉದ್ಯೊಗಿನಿ, ಪಿಎಂಇಜಿಪಿ ( ಪ್ರೆöÊಮ್ ಮಿನಿಸ್ಟರ್ ಎಂಪ್ಲಾಯಮೆAಟ್ ಜನರೇಶನ್ ಪ್ರೋಗ್ರಾಮ್ ), ಪಿಎಂ ಸ್ವನಿಧಿ, ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶಿಲನೆ ನಡಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ನಬಾರ್ಡದ ಎಜಿಎಂ ಮಹಾದೇವ ಕೀರ್ತಿ, ಆರ್‌ಬಿಐದ ವೆಂಕಟರಾಮಯ್ಯ ಟಿ ಎಸ್, ಎಸ್‌ಬಿಐದ ನಾಗಸುಬ್ಬಾರೆಡ್ಡಿ , ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಬ್ಯಾಂಕ್ ಗಳ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ ಗದಗ : ಮಾರ್ಚ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಗದಗ : ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು..! ಮಾಜಿ ಪೈಲ್ವಾನರ್ ಮಾಸಾಶನ ಹೆಚ್ಚಳಕ್ಕೆ ಸ್ವಾಗತ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು