ಗದಗ ಅಕ್ಟೋಬರ್ 8: 2024-25 ನೇ ಸಾಲಿಗೆ ಗದಗ ಜಿಲ್ಲಾ ವ್ಯಾಪ್ತಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೆಟ್ರಿಕ್ ನಂತರದ ವಸತಿನಿಲಯಗಳಿಗೆ ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸ, ಸಾಮಾನ್ಯ ಪದವಿ ಮಟ್ಟದ ಕೋರ್ಸ, ವೃತ್ತಿಪರ ಕೋರ್ಸ, ಸ್ನಾತಕೋತ್ತರ ಕೋರ್ಸಿನ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ನವ್ಹೆಂಬರ್ 11.ರೊಳಗೆhttps://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ