ಗದಗ : ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಗದಗದ ಮೊದಲನೇ ವರ್ಷದ ವಿದ್ಯಾರ್ಥಿಗಳು ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೊದಲನೇ ವರ್ಷದ ಎಂ.ಬಿ.ಬಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ. ೨೧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೯೦ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ರಾಜ್ಯದಲ್ಲಿ ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಅತೀ ಹೆಚ್ಚು (೯೮.೬%) ಉತ್ತೀರ್ಣತೆಯಲ್ಲಿ ತೇರ್ಗಡೆಯಾಗಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ದಾಖಲೆ ನಿರ್ಮಿಸಿದ್ದಾರೆ.
ಸದರಿ ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಡಾ. ಹೆಚ್.ಕೆ ಪಾಟೀಲರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲರು ಹಾಗೂ ನಿರ್ದೇಶಕರು, ಪ್ರಾಂಶುಪಾಲರು, ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತçಚಿಕಿತ್ಸಕರು ಮತ್ತು ಬೋಧಕ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.