(ಉದ್ಯೋಗ ಖಾತ್ರಿ ನಡಿಗೆ ಸಬಲತೆಯೆಡೆಗೆ ಅಭಿಯಾನ)
ಗದಗ:- ಗದಗ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಜನರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತಮ್ಮ ಬೇಡಿಕೆಗಳನ್ನು ಆನ್‌ಲೈನ್ ಮೂಲಕ ಕಾಮಗಾರಿಗಳ ಬೇಡಿಕೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೌದು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಉದ್ಯೋಗ ಚೀಟಿದಾರ ರೈತರು ತಮಗೆ ಅವಶ್ಯಕತೆ ಇರುವ ವೈಯಕ್ತಿಕ ಅಥವಾ ಸಮುದಾಯ ಕಾಮಗರಿಗಳ ಬೇಡಿಕೆಗಳನ್ನು ಇನ್ನೂ ಮುಂದೆ ಪಂಚಾಯಿತಿಗೆ ಹೋಗಿ ಅರ್ಜಿ ಸಲ್ಲಿಸಲು ಪರದಾಡುವ ಅವಶ್ಯಕತೆ ಇಲ್ಲ, ಅಕ್ಟೋಬರ್ ಮಾಹೆಯಿಂದ ನವೆಂಬರ್-5 ರವರೆಗೆ ನಿಮ್ಮ ಬೆರಳು ತುದಿಯಲ್ಲಿ ಬೇಡಿಕೆ ಸಲ್ಲಿಸಲು ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಸರಳ ವಿಧಾನವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆಯುಕ್ತಾಲಯವು ಜಾರಿಗೆ ತಂದಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ “ವೈಯಕ್ತಿಕ ಕಾಮಗಾರಿ ಬೇಡಿಕೆ ಪಟ್ಟಿಗೆ” ಇಡುವ ಮೂಲಕ ಬೇಡಿಕೆ ಸಂಗ್ರಹಿಸಲಾಗುತ್ತಿದ್ದು 2025-26 ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆ ತಯಾರಿಕೆಯಲ್ಲಿ ಸಾರ್ವಜನಿಕರ ಪಾಲ್ಗೋಳ್ಳುವಿಕೆ ಹೆಚ್ಚಿಸುವ ಹಾಗೂ ಸಾರ್ವಜನಿಕರ ಜವಾಬ್ದಾರಿಯ ಅರಿವು ಮೂಡಿಸುವ ಕ್ರಿಯಾತ್ಮಕ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆಗಳು ಗ್ರಾಮ ಪಂಚಾಯತಿ ಹಂತದಲ್ಲಿ ಆಯೊಜಿಸುತ್ತಿದ್ದು ಇದರ ಸದುಪಯೋಗ ಪಡಿಸಿಕೋಳ್ಳುವಂತೆ ಕೋರಿಕೆ.