Sunday, March 23, 2025
Google search engine
Homeಉದ್ಯೋಗಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿಗೆ ಸಚಿವ ಎಚ್. ಕೆ. ಪಾಟೀಲ ಅವರಿಂದ ಅದ್ದೂರಿ ಸ್ವಾಗತ*

ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿಗೆ ಸಚಿವ ಎಚ್. ಕೆ. ಪಾಟೀಲ ಅವರಿಂದ ಅದ್ದೂರಿ ಸ್ವಾಗತ*

ಗದಗ ಅ.೧೨: ಕಿತ್ತೂರು ಉತ್ಸವದ ಪ್ರಯುಕ್ತ ರಾಜ್ಯಾಂಧ್ಯಂತ ಹಮ್ಮಿಕೊಂಡಿರುವ ವಿಜಯ ಜ್ಯೋತಿ ಯಾತ್ರೆಯು ಶನಿವಾರ ಗದಗ ನಗರ ತಲುಪಿತು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ವಿಜಯ ಜ್ಯೋತಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸ್ವಾಗತಿಸಿ, ಪೂಜೆ ಸಲ್ಲಿಸಿದರು.

ಕಿತ್ತೂರ ಚೆನ್ನಮ್ಮಾ ವಿಜಯ ಜ್ಯೋತಿಗೆ ಸಚಿವರು ಸ್ವಾಗತಿಸಿ, ರಥದಲ್ಲಿದ್ದ ರಾಣಿ ಚೆನ್ನಮ್ಮ ಪುತ್ಥಳಿಗೆ ಪುಷ್ಪಹಾರ ಅರ್ಪಿಸಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಗರದ ಪ್ರವಾಸಿ ಮಂದಿರದಿಂದ ವೀರಜ್ಯೋತಿ ಮೆರವಣಿಗೆಯು ಆರಂಭವಾಗಿ ಮುಳಗುಂದ ನಾಕಾ, ಎಸಿ ಕಚೇರಿ ಮೂಲಕ ಕಲಾ ತಂಡಗಳೊಂದಿಗೆ ಸಾಗಿದ ವಿಜಯ ಜ್ಯೋತಿ ಯಾತ್ರೆ ಕಿತ್ತೂರ ಚನ್ನಮ್ಮ‌ ವೃತ್ತ ತಲುಪಿತು.

ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಅ.೨೩ ರಿಂದ ೨೫ ರವರೆಗೆ ನಡೆಯಲಿರುವ ಕಿತ್ತೂರು ಉತ್ಸವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆ ಹಾವೇರಿ ಜಿಲ್ಲೆಯಿಂದ ಗದಗ ಜಿಲ್ಲೆಗೆ ತಲುಪಿದ್ದು, ಲಕ್ಕುಂಡಿ, ಬನ್ನಿಕೊಪ್ಪ ಮಾರ್ಗವಾಗಿ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಗೆ ಬಿಳ್ಕೊಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮೀತಿ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲ್ಲೂಕಾಧ್ಯಕ್ಷ ಅಶೋಕ ಮಂದಾಲಿ, ಸಿದ್ದಪ್ಪ ಪಲ್ಲೇದ, ಎಮ್. ಎಸ್. ಕರಿಗೌಡರ್, ಶರಣು ಪಾಟೀಲ, ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಟಾಧಿಕಾರಿ ಎಂ ಬಿ ಸಂಕದ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ, ತಹಶಿಲ್ದಾರ ಶ್ರೀನಿವಾಸಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ ಗದಗ : ಮಾರ್ಚ 15 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಗದಗ : ರೈತರ ಹೊಟ್ಟು, ಮೇವಿನ ಬಣವೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು..! ಮಾಜಿ ಪೈಲ್ವಾನರ್ ಮಾಸಾಶನ ಹೆಚ್ಚಳಕ್ಕೆ ಸ್ವಾಗತ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ: ನ್ಯೂಝಿಲೆಂಡ್ ವಿರುದ್ಧ ಭರ್ಜರಿ ಗೆಲುವು