Friday, October 18, 2024
Google search engine
Homeಉದ್ಯೋಗಗದಗ : ವಿವಿಧ ಅರ್ಜಿ ಆಹ್ವಾನ

ಗದಗ : ವಿವಿಧ ಅರ್ಜಿ ಆಹ್ವಾನ

ಅರ್ಜಿ ಆಹ್ವಾನ

ಗದಗ ಅಕ್ಟೋಬರ್ 14: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಚರ್ಮ ಕುಶಲ ಕರ್ಮಿಗಳಿಗಾಗಿ 2024-25 ನೇ ಸಾಲಿನ ಕ್ರಿಯಾ ಯೋಜನೆಯ ಪ್ರಕಾರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದ್ದು ಗದಗ ಜಿಲ್ಲೆಯ ಚರ್ಮ,ಕುಶಲಕರ್ಮಿಗಳು ಮಾದಿಗ, ಸಮಗಾರ, ಡೋರ, ಮಚಗಾರ, ಜನಾಂಗದವರು ಅರ್ಜಿ ಸಲ್ಲಿಸಬಹುದಾಗಿದೆ.

https://sevasindhu.karnatak.govt.in ಪೋರ್ಟಲ ಮೂಲಕ ಅಥವಾ ಗ್ರಾಮ ಒನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಸಂಯೋಜಕರು, ಜಿಲ್ಲಾಡಳಿತ ಭವನ, ಗದಗ ಜಿಲ್ಲೆ, ರೂ ನಂ. 122/1 , ಸಮಾಜ ಕಲ್ಯಾಣ ಇಲಾಖೆ ( ಅಲೆಮಾರಿ ಅಭಿವೃದ್ಧಿ ಕೋಶ) ಸಂಪರ್ಕಿಸಬಹುದಾಗಿದೆ.

ರೈತ ಬಾಂಧವರ ಗಮನಕ್ಕೆ

 ಗದಗ ಅಕ್ಟೋಬರ್ 14: ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ರೈತರಿಗೆ ವಿತರಿಸುವ ಉದ್ದೇಶದಿಂದ ಗದಗ ಜಿಲ್ಲೆ ಸಾಮಾನ್ಯ ವರ್ಗ ಘಟಕದ ವೈಯಕ್ತಿಕ ಫಲಾನುಭವಿಗೆ ಶುಗರ್ ಕೇನ್ ಹಾರ್ವೆಸ್ಟರ್ ಹಬ್ ಕ್ರಿಯಾ ಯೋಜನೆ ಅನುಮೋದನೆಗೊಂಡಿರುತ್ತದೆ. ಸದರಿ ಯೋಜನೆಯಡಿ ಸಾಮಾನ್ಯ ವರ್ಗ ಘಟಕದಡಿ ವೈಯಕ್ತಿಕ ಫಲಾನುಭವಿಗೆ ಗರಿಷ್ಠ 39 ಲಕ್ಷ (ಶೇ. 40% ಸಹಾಯಧನ) ಇರುತ್ತದೆ. ಆಸಕ್ತ ರೈತರು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಈ ಕೆಳಗಿನ ದಾಖಲಾತಿಯೊಂದಿಗೆ ಅಕ್ಟೋಬರ್ 30 ರೊಳಗಾಗಿ ಆಯಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸುವುದು. ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಅರ್ಜಿಗಳನ್ನು ಪರಿಶೀಲಿಸಿ, ಜಿಲ್ಲಾಮಟ್ಟದ ಉಪಕರಣ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಉಪ ಕೃಷಿ ನಿರ್ದೇಶಕರಿಗೆ ಸಲ್ಲಿಸುವುದು. ನಂತರ ಉಪ ಕೃಷಿ ನಿರ್ದೇಶಕರ ಕಛೇರಿಯಿಂದ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ ಜಿಲ್ಲಾಮಟ್ಟದ ಉಪಕರಣ ಸಮಿತಿಯಲ್ಲಿ ಮಂಡಿಸಲಾಗುವುದು.

ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಶುಗರ್‌ಕೇನ್ ಹಾರ್ವೆಸ್ಟöರ್ ಮತ್ತು ಕಂಬೈನಡ್ ಹಾರ್ವೆಸöರ್ ಹಬ್‌ಗೆ ಒಂದಕ್ಕಿAತ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿ ಅರ್ಹಗೊಂಡಲ್ಲಿ ಲಾಟರಿ ಮುಖಾಂತರ ಫಲಾನುಭವಿಯನ್ನು ಆಯ್ಕೆ ಮಾಡಲಾಗುವುದು. ನಂತರ ಜಂಟಿ ಕೃಷಿ ನಿರ್ದೇಶಕರ ಕಛೇರಿಯಿಂದ ಅಯ್ಕೆಯಾದ ಫಲಾನುಭವಿಗೆ ಕೃಷಿ ಯಂತ್ರೋಪಕರಣಗಳನ್ನು ದಾಸ್ತಾನೀಕರಿಸಲು ಕಾರ್ಯಾದೇಶ ನೀಡಲಾಗುವುದು. ಶುಗರ್ ಕೇನ್ ಹಾರ್ವೆಸöರ್ ಮತ್ತು ಕಂಬೈನಡ್ ಹಾರ್ವೆಸ್ಟöರ್ ಹಬ್‌ವಾರು ಸ್ವೀಕೃತವಾದ ಯಂತ್ರೋಪಕರಣಗಳನ್ನು ಸಂಬAಧಿಸಿದ ರೈತ ಸಂಪರ್ಕ ಕೇಂದ್ರ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಉಪ ಕೃಷಿ ನಿರ್ದೇಶಕರು ಪರಿಶೀಲಿಸಿ, ಸಹಾಯಧನವನ್ನು ನಿಯಮಾನುಸಾರ ಸಂಬAಧಿಸಿದ ಸಾಲದ ಬ್ಯಾಂಕ್ ಖಾತೆಗೆ ಕ್ರ‍್ರೆಡಿಟ್ ಲಿಂಕಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಮೂಲಕ ಜಮಾ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರು, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಾನುಭವಿಗಳು ಅರ್ಜಿಯೊಂದಿಗೆ ಸಲ್ಲಿಸಬೇಕಾದ ವಿವರಗಳು : ಪಹಣಿ ಪ್ರತಿ, ಆಧಾರ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ ಮತ್ತು ಎಪ್ ಐ ಡಿ ಸಂಖ್ಯೆ. ರೂ. 20 ಛಾಪಾ ಕಾಗದದ ಮೇಲೆ ಹಬ್ ನ್ನು ್ನ ಪರಬಾರೆ ಮಾಡುವುದಿಲ್ಲವೆಂದು ಮುಚ್ಚಳಿಕೆ ಪತ್ರ (ನೋಟರಿಯೊಂದಿಗೆ). ಸಹಾಯಧನವು ಕ್ರೆಡಿಟ್ ಲಿಂಕಡ್ ಬ್ಯಾಕ್ ಎಂಡೆಡ್ ಸಬ್ಸಿಡಿ ಆಗಿರುವುದರಿಂದ ಸಂಬAಧಿಸಿರುವ ಬ್ಯಾಂಕ್‌ನಿAದ ತಾತ್ವಿಕ ಸಾಲ ಮಂಜೂರಾತಿ ಪತ್ರ

ಹೆಚ್ಚಿನ ಮಾಹಿತಿಗಾಗಿ ಸಂಬAಧಿಸಿದ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ/ಉಪ ಕೃಷಿ ನಿರ್ದೇಶಕರ ಕಛೇರಿ/ಜಂಟಿ ಕೃಷಿ ನಿದೇಶಕರ ಕಛೇರಿಗೆ ಸಂಪರ್ಕಿಸಬಹುದಾಗಿದೆ. .

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ