Friday, October 18, 2024
Google search engine
Homeಉದ್ಯೋಗಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಗದಗ : ಒಳ ಮೀಸಲಾತಿ ಜಾರಿಗೆ ಮಾಡಲು ಆಗ್ರಹಿಸಿ ಮಾದಿಗ ಸಂಘರ್ಷ ಸಮೀತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಭಾರತದಲ್ಲಿ ಹಲವಾರು ಜಾತಿಗಳಿವೆ. ಇಲ್ಲಿ ಮೇಲ್ದಾತಿಗಳು. ಮೇಲ್ವರ್ಗಗಳು, ಕೆಳಜಾತಿಗಳು, ಕೆಳವರ್ಗಗಳು ಶತಮಾನಗಳ ಕಾಲ ಕೆಳಜಾತಿಯ ಜನರಿಗೆ ಶಿಕ್ಷಣದ ಹಕ್ಕು, ಆಸ್ತಿಯ ಹಕ್ಕು, ಸ್ವಾತಂತ್ರ್ಯದ ಹಕ್ಕು ಇತ್ಯಾದಿಗಳನ್ನು ನಿರಾಕರಿಸಿ ಶೋಷಿತ ಗುಲಾಮರಂತೆ ನಡೆಸಿಕೊಂಡು ಬರಲಾಯಿತು. ಈ ರೀತಿಯ ಅಸಮಾನತೆಯ ಹೋಗಲಾಡಿಸಿ ಸಮಾನತೆಯನ್ನು ತರಬೇಕೆಂಬುದು ಡಾ. ಬಾಬಾ ಸಾಹೇಬ್ ಅಂಬೇಡ್ಕ‌ರ್ ರವರ ಕನಸಾಗಿತ್ತು. ಅದೇ ರೀತಿ ಭಾರತದಲ್ಲಿ ಬ್ರಾಹ್ಮಣ ಅಸ್ಪಶ್ಯ ಜನಾಂಗಗಳವರೆಗೆ ಶ್ರೇಣಿಕೃತ ಜಾತಿ ಪದ್ಧತಿ ಹಾಗೂ ಸಾಮಾಜಿಕ, ಆರ್ಥಿಕ ಅಸಮಾನತೆಗಳು ಶತಮಾನದಿಂದಿವೆ. ಶೂದ್ರ ಹಾಗೂ ಅತಿ ಶೂದ್ರವಾದ ಪರಿಶಿಷ್ಟ ಜನಾಂಗಗಳಲ್ಲಿಯೂ ಸಹ ಶ್ರೇಣಿಕೃತ ವ್ಯವಸ್ಥೆ ತನ್ನ ಕೆನ್ನಾಲಿಗೆ ಚಾಚಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಟ್ಟು ಜನಸಂಖ್ಯೆಯ ಆಧಾರದ ಮೇಲೆ ಕ್ರಮವಾಗಿ ಮೀಸಲಾತಿಯು ಶಿಕ್ಷಣ, ಉದ್ಯೋಗ, ಹಾಗೂ ರಾಜಕೀಯ ರಂಗಗಳಲ್ಲಿ ಜಾರಿಯಲ್ಲಿದೆ.

ಪರಿಶಿಷ್ಟ ಜಾತಿಗಳಲ್ಲಿ ಮಾದಿಗ ಸಮುದಾಯವು ಇಡೀ ದಕ್ಷಿಣ ಭಾರತದಲ್ಲಿ ಮಾದಿಗ ಸಮುದಾಯವು ಅತ್ಯಂತ ಶೋಷಿತ ಸಮಾಜವಾಗಿದ್ದು, ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಮತ್ತು ರಾಜಕೀಯ ವಲಯದಲ್ಲಿ ಅವಕಾಶವಂಚಿತರಾಗಿ ಅತ್ಯಂತ ಹಿಂದುಳಿದಿದೆ. ಈ ಎಲ್ಲಾ ಕ್ಷೇತ್ರಗಳಲ್ಲಿ ಸಮಾನತೆ ಸಾಧಿಸಲು ಮಾದಿಗ ಸಮುದಾಯ ಕಳೆದ ಆರು ದಶಕಗಳಿಂದ ಹೋರಾಟ, ಧರಣಿ, ಸತ್ಯಾಗ್ರಹ, ಚಳುವಳಿ, ಉಪವಾಸ, ಅರೆಬೆತ್ತಲೆ ಮೆರವಣಿಗೆ, ಪಾದಯಾತ್ರೆ ಮಾಡಿದ್ದೇವೆ. ಇಲ್ಲಿಯವರೆಗೆ ಸಾಕಷ್ಟು ಮಾದಿಗರು ತಮ್ಮ ಪ್ರಾಣವನ್ನು ಬಲಿಕೊಟ್ಟಿದ್ದಾರೆ. ಈ ಬಗ್ಗೆ ನಮ್ಮ ಒಳಮೀಸಲಾತಿಗೆ ದಿ. 01-08-2024 ರಂದು ಘನ ಸರ್ವೋಚ್ಚ ನ್ಯಾಯಾಲಯದ 7 ಜನ ಸದಸ್ಯ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಮೂಲಕ “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬ ಆಶಯದಂತೆ ಪ. ಜಾತಿ- ಪ. ಪಂಗಡದ 151 ಉಪಜಾತಿಗಳಿಗೆ ಆಯಾ ಜಾತಿ ಜನಸಂಖ್ಯಾವಾರು ಒಳಮೀಸಲಾತಿಯನ್ನು ಕೊಡಬೇಕು ಎಂದು ಐತಿಹಾಸಿಕ ತೀರ್ಪುಕೊಟ್ಟಿದೆ. ಈ ತೀರ್ಪು

ನೊಂದ, ಶೋಷಿತ ತಳ ಸಮುದಾಯಗಳ ದಶಕಗಳ ಹೋರಾಟಕ್ಕೆ ಸಂದ ಗೆಲವುವಾಗಿದೆ.

ಆದರೆ ರಾಜ್ಯ ಸರ್ಕಾರ ಒಳ ಮೀಸಲಾತಿ ತೀರ್ಪನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲ್ಲಿಯವರೆಗೆ ಒಳಮೀಸಲಾತಿ ಅನುಷ್ಠಾನಕ್ಕೆ ಸರಕಾರ ಮುಂದಾಗದೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ರಾಜ್ಯ ಸರ್ಕಾರ ಕೂಡಲೇ ಒಳಮೀಸಲಾತಿಯನ್ನು ಜಾರಿಗೆ ತಂದು ಕಳೆದ ಆರು ದಶಕಗಳ ಹೋರಾಟಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಕರ್ನಾಟಕ ಮಾದಿಗ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕವು ಈ ಮನವಿ ಪತ್ರದ ಮೂಲಕ ಮನವಿಯನ್ನು ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಮಾದಿಗ ಸಂಘರ್ಷ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದವರು ಮಹರ್ಷಿ ವಾಲ್ಮೀಕಿ ಗದಗ : ಹೊಸ ಬಸ್ ನಿಲ್ದಾಣ ರಸ್ತೆಯಲ್ಲಿ ಕಣ್ಮುಚ್ಚಿದ ವಿದ್ಯುತ್‌ ದೀಪಗಳು ಗದಗ : “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಹುಬ್ಬಳ್ಳಿ : ಮುಸ್ಲಿಮ್ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿ ಮುಂದುವರೆಸಲು ಆಗ್ರಹ  ಹುಬ್ಬಳ್ಳಿ : ಲಿಡಕರ್ ಹಿತ ಅಭಿವೃದ್ಧಿ ಸಂಘದ ವತಿಯಿಂದ ಮನವಿ  ಗದಗ : ಒಳ ಮೀಸಲಾತಿಯನ್ನು ಜಾರಿ ಮಾಡಲು ಮಾದಿಗ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಹುಬ್ಬಳ್ಳಿ : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇಸ್ಮಾಯಿಲ್ ಸಾಬ್ ಕಾಲೇಬುಡ್ಡೆ ನಿಧನ ಗದಗ : ವಿವಿಧ ಅರ್ಜಿ ಆಹ್ವಾನ ಗದಗ : ನರೇಗಾ ನೆರವು ಪಡೆದು ಬದುಕು ಬದಲಾಗಿಸಿಕೊಳ್ಳಿ : ಚಂದ್ರಶೇಖರ ಬಿ ಕಂದಕೂರ ಹುಬ್ಬಳ್ಳಿ : ಉತ್ತರ ಕರ್ನಾಟಕ ಹೋರಾಟ ವೇದಿಕೆಯಿಂದ ಹುಬ್ಬಳ್ಳಿ , ಧಾರವಾಡ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ