ಜಿಲ್ಲಾಡಳಿತದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
ಗದಗ ಅಕ್ಟೋಬರ್. ೧೭: ಮಹಾನ್ ತಪಸ್ವಿ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾ ಗ್ರಂಥವನ್ನು ರಚಿಸಿ ಲೋಕ ಕಲ್ಯಾಣಕ್ಕಾಗಿ ಅರ್ಪಿಸಿದವರು ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ. ಸಂಕನೂರ ಅವರು ಹೇಳಿದರು.
ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,ನಗರಸಭೆ ಗದಗ-ಬೆಟಗೇರಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಸಂಘ (ರಿ) ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಮಾಯಣ ಮಹಾ ರಾಮಾಯಣವನ್ನು ಕಾವ್ಯರೂಪದಲ್ಲಿ ರಚಿಸಿದ್ದಾರೆ ೨೪೦೦ ಶ್ಲೋಕಗಳಿರುವ ಈ ಮಹಾ ಗ್ರಂಥವನ್ನು ರಚಿಸಿ ಜಗತ್ಪ್ರಸಿದ್ಧಿ ಹೊಂದಿದವರು ವಾಲ್ಮೀಕಿ ಮಹರ್ಷಿ. ಈ ಮಹಾನ್ ಗ್ರಂಥವನ್ನು ಎಲ್ಲರೂ ಓದುವ ಮೂಲಕ ಅರ್ಥೈಸಿಕೊಳ್ಳುವ ಕಾರ್ಯ ಆಗಬೇಕಿದೆ. ಮಹರ್ಷಿ ವಾಲ್ಮೀಕಿ ಅವರ ಅನೇಕ ದಂತ ಕಥೆಗಳ ಉದಾಹರಣೆಗಳು, ನೀತಿ ಪಾಠಗಳನ್ನು ಅಳವಡಿಸಿಕೋಂಡು ಉತ್ತಮ ಬದುಕು ರೂಪಿಸಲು ಸಹಕಾರಿಯಾಗಿದೆ ಎಂದು ಹೇಳಿದರು.

ವಾಲ್ಮೀಕಿ ಸಮುದಾಯದ ಬಾಂಧವರು ಪ್ರೀತಿ ವಿಶ್ವಾಸಕ್ಕೆ ಹೆಸರುವಾಸಿಗಳು. ಸಂದರ್ಭ ಬಂದರೆ ಜೀವಕ್ಕೆ ಜೀವ ನೀಡುವವರು ಎಂದು ಬಣ್ಣಿಸಿದರು.
ಬಡತನ ಸಾಧನೆಗೆ ಅಡ್ಡಿಯಾಗಲಾರದು ಸಮಾಜದಲ್ಲಿ ಅನೇಕರು ಬಡತನದಲ್ಲಿ ಜನಿಸಿ ಮಹಾನ್ ಸಾಧಕರಾದ ಉದಾಹರಣೆಗಳಿವೆ. ಕೀಳರಿಮೆ ತೊರೆದು ಉನ್ನತ ಮಟ್ಟದಲ್ಲಿ ಆಲೋಚಿಸಿ ಸಾಧನೆ ಮಾಡಲು ಮುಂದಾಗಬೇಕು. ವಾಲ್ಮೀಕಿ ಸಮಾಜ ಬಾಂಧವರು ದೊಡ್ಡ ದೊಡ್ಡ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ತಮ್ಮದೇ ಕೊಡಗುಗಳನ್ನು ನೀಡುವಂತಾಗಲಿ ಎಂದು ಶಾಸಕ ಎಸ್. ವಿ. ಸಂಕನೂರ ನುಡಿದರು.
ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರ ಮಹರ್ಷಿ ವಾಲ್ಮೀಕಿ ಅವರ ಕುರಿತ ಸಂದೇಶವನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ ಅವರು ಕಾರ್ಯಕ್ರಮದಲ್ಲಿ ಹೇಳಿದರು.
ನಿಪ್ಪಾಣಿಯ ವಿ.ಎಸ್.ಎಂ.ಜಿ.ಆಯ್.ಬಾಗೇವಾಡಿ ಕಾಲೇಜಿನ ಪ್ರಾಚಾರ್ಯ ಡಾ.ಎನ್.ಎಸ್.ಮಾದಣ್ಣವರ ಅವರು ಶ್ರೀ ಮಹರ್ಷಿ ವಾಲ್ಮೀಕಿ ಆರ್ದಶಗಳ ಕುರಿತು ಉಪನ್ಯಾಸ ನೀಡುತ್ತಾ, ಪ್ರಸ್ತುತ ಕಾಲಘಟ್ಟಕ್ಕೆ ವಾಲ್ಮೀಕಿ ಅವರ ರಾಮಾಯಣ ಕಾವ್ಯ ಗ್ರಂಥ ಹೇಗೆ ಅಳವಡಿಸಿಕೊಳ್ಳಬೇಕು ಸಮಾಜ ಬಾಂಧವರು ಯಾವ ರೀತಿ ಬದುಕು ರೂಪಿಸಿಕೊಳ್ಳಬೇಕು ಎಂಬುದರ ಕುರಿತು ಉದಾರಣೆ ಸಮೇತ ವಿವರಿಸಿದರು.
ರಾಮ ರಾಜ್ಯದ ಆದರ್ಶಗಳನ್ನು ಸರ್ಕಾರ ಶಕ್ತಿ ಯೋಜನೆ, ಗೃಹಲಕ್ಷ್ಮಿ ಮೂಲಕ ಸಹಕಾರ ಗೊಳಿಸಿದೆ. ಅಲ್ಲದೆ ಮಹಿಳಾ ಮತ್ತು ಮಕ್ಕಳ ಇಲಾಖೆ ಮೂಲಕ ಸ್ತ್ರೀ ಸಬಲೀಕರಣ, ಶಿಕ್ಷಣಕ್ಕಾಗಿ ವಸತಿ ನಿಲಯಗಳನ್ನು ಆರಂಭಿಸಿ ಒತ್ತು ನೀಡಿದೆ ಎಂದರು.
ಶೋಷಣೆ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಬುದ್ಧ ಬಸವ ಅಂಬೇಡ್ಕರ್ ಕಾಲದಿಂದಲೂ ಅಪಾರ ಕಾರ್ಯಗಳನ್ನು ಆಗುತ್ತಾ ಬಂದಿದೆ. ಮಹರ್ಷಿ ವಾಲ್ಮೀಕಿ ಸಮುದಾಯದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಹುದ್ದೆಗಳ ಮೂಲಕ ಅಲಂಕರಿಸುವಂತಾಗಬೇಕು, ಹಾಗೂ ಸಮಾಜಕ್ಕೆ ತಮ್ಮದೇ ಆದ ಕೋಡುಗೆಗಳನ್ನು ನೀಡಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಗದಗ ಬೆಟಗೇರಿ ನಗರಸಭೆಯ ಸದಸ್ಯರಾದ ವಿನಾಯಕ್ ಮಾನ್ವಿ , ನಾಗರಾಜ್ ತಳವಾರ, ನಾಮನಿರ್ದೇಶಿತ ಸದಸ್ಯ ದುರ್ಗೇಶ್ ವಿಭೂತಿ, ಮಹರ್ಷಿ ವಾಲ್ಮೀಕಿ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬೆಳವಾಡಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪ ವಿಭಾಗಾಧಿಕಾರಿ ಗಂಗಪ್ಪ ಎಂ ಹಾಜರಿದ್ದರು.
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಪ್ರಾಸ್ತಾವಿಕ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿದರು. ಡಾ. ವೆಂಕಟೇಶ್ ಆಲ್ಕೋಡ್ ಹಾಗೂ ತಂಡದವರು ನಾಡಗೀತೆ ಹಾಗೂ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಉಪನ್ಯಾಸಕ ಬಾಹುಬಲಿ ಜೈನರ್ ಕಾರ್ಯಕ್ರಮ ನಿರ್ವಹಿಸಿದರು.