15.7 C
New York
Friday, May 9, 2025

Buy now

spot_img

ಗದಗ : ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿರ್ವಹಿಸಲು ತಾಲೂಕು ಆಡಳಿತಕ್ಕೆ ಸೂಚನೆ ; ಜಿಲ್ಲಾಧಿಕಾರಿಗಳು

ಡಿಸಿ, ಸಿಇಓ ಅವರಿಂದ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ

ಗದಗ  ಅಕ್ಟೋಬರ್ 18 : ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಶುಕ್ರವಾರ ಜಿಲ್ಲೆಯ ನರಗುಂದ ಹಾಗೂ ರೋಣ ತಾಲೂಕಿನ ಬೆಣ್ಣೆ ಹಳ್ಳ ಮತ್ತು ಮಲಪ್ರಭಾ ನದಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕ ಮಳೆಯಿಂದಾಗಿ ಬೆಣ್ಣೆಹಳ್ಳದ ನೀರಿನ ಹರಿವಿನ ಪ್ರಮಾಣ ಒಮ್ಮಿಲೇ ಹೆಚ್ಚಾಗಿ ಅಗಾಧ ಪ್ರಮಾಣದ ಬೆಳೆ ಆಸ್ತಿ ಹಾನಿ ಮಾಡಲಿದೆ. ಅದೇ ತರಹ ಮಲಪ್ರಭಾ ನದಿ ಪ್ರವಾಹದಿಂದಲೂ ಈ ಭಾಗದ ಗ್ರಾಮಗಳಿಗೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಂಭವವಿದೆ. ತಾಲೂಕಾ ಆಡಳಿತಗಳು ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಶಿಸ್ತುಬದ್ಧವಾಗಿ ಯೋಜಿಸಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಪ್ರವಾಹದ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪೀಡಿತವಾಗುವ ಗ್ರಾಮಗಳಲ್ಲಿ ವಾಸಿಸುವ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ಸೂಚಿಸಬೇಕು. ಅಲ್ಲದೇ ಜನಜಾನುವಾರು ಹಾನಿಯಾಗದಂತೆ ತಡೆಯಲು ಪ್ರಥಮಾದ್ಯತೆ ನೀಡಬೇಕು ಎಂದು ತಹಶೀಲ್ದಾರರಿಗೆ ಪ್ರವಾಹ ಪೀಡಿತ ಪ್ರದೇಶ ವೀಕ್ಷಣಾ ಸಮಯದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದರು.
ಸಾರ್ವಜನಿಕರು ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಮಾಡದಿರುವಂತೆ ತಿಳಿಹೇಳಬೇಕು. ಅಲ್ಲದೇ ವಿದ್ಯುತ್ ಕಂಬಗಳ ಹತ್ತಿರ ಹಾಗೂ ನದಿ ಪಾತ್ರದ ಹತ್ತಿರ ಜನಜಾನುವಾರು ಸುಳಿಯದಂತೆ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲು ಜಾಗೃತಿ ಮೂಡಿಸಬೇಕು. ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸ್ಥಳೀಯ ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತದೊಂದಿಗೆ ನಿರಂತರ ಸಮನ್ವಯ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಹೇಳಿದರು.
ಬೆಳೆ ಹಾನಿ ಪ್ರದೇಶಕ್ಕೆ ಭೇಟಿ: ನರಗುಂದ ಹಾಗೂ ರೋಣ ತಾಲೂಕುಗಳ ಪ್ರವಾಹ ಹಾಗೂ ಅತೀವೃಷ್ಟಿಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಸರ್ಕಾರದ ಮಾರ್ಗಸೂಚಿಗಳನ್ವಯ ಬೆಳೆ ಹಾನಿಗೊಳಗಾದ ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ಒದಗಿಸಲು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದರು. ನರಗುಂದ ಹಾಗೂ ರೋಣ ತಾಲೂಕಿನ ಬೆಳೆಹಾನಿ ಪ್ರದೇಶಗಳಾದ ಹದಲಿ, ಮೆಣಸಗಿ, ಯಾವಗಲ್, ಬನಹಟ್ಟಿ, ಸುರಕೋಡ, ಹೊಳೆಆಲೂರು ಸೇರಿದಂತೆ ಇನ್ನಿತರೆ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ನರಗುಂದ ತಹಶೀಲ್ದಾರ ಶ್ರೀಶೈಲ ತಳವಾರ ಸೇರಿದಂತೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಜಾನಮಟ್ಟಿ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎಂ.ಬ್ಯಾಗಿ, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.
ಮಲಪ್ರಭಾ ನದಿಯ ನೀರಿನ ಮಟ್ಟ : ಮಲಪ್ರಭಾ ನದಿ (ರೇಣುಕಾ ಸಾಗರ) ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ–37.731 ಟಿಎಂಸಿ ಇದ್ದು, ಶುಕ್ರವಾರ ಬೆಳಿಗ್ಗೆ 37.731 ಟಿಎಂಸಿ ತಲುಪಿದೆ. ನದಿಯ ಒಳಹರಿವು 8,694 ಕ್ಯೂಸೆಕ್ಸ್ ಇದ್ದು ಹೊರಹರಿವು 8,694 ಕ್ಯೂಸೆಕ್ಸ್ ಇದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ