ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು.
ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆಂದು ಘೋಷಿಸಿದ್ದರು. ಆದರೂ ಸಹ ಬಿಜೆಪಿ ನಾಯಕರ ಸಲಹೆ ಮೇರೆಗೆ ಎನ್ಡಿಎ ಟಿಕೆಟ್ ಸಿಗಬಹುದು ಎಂದು ಕಾದು ಕುಳಿತ್ತಿದ್ದರು. ಆದ್ರೆ, ಇದೀಗ ಡಿಕೆ ಶಿವಕುಮಾರ್, ಯೋಗೇಶ್ವರ್ ಅವರನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ.