Monday, February 17, 2025
Google search engine
Homeಆರೋಗ್ಯಗದಗ : ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಗೆ ಬೆಂಬಲ...

ಗದಗ : ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ

ಗದಗ  ಅಕ್ಟೋಬರ್ 28: 2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ 2024-25 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೃಷಿ ಹುಟ್ಟುವಳಿಯಿಂದ ಶೇಂಗಾ ಖರೀದಿಸುವ ಕುರಿತು ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಸರ್ಕಾರದ ಆದೇಶದನುಸಾರ ರೈತರು ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಮತ್ತು ಖರೀದಿ ಅವಧಿಯನ್ನು 90 ದಿನಗಳವರೆಗೆ ನೊಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸತಕ್ಕದ್ದು. ಜಿಲ್ಲೆಯಲ್ಲಿ ತೆರೆಯಲಾಗುವ ಶೇಂಗಾ ಹುಟ್ಟುವಳಿ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್. ಎ ಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್ ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ಎಫ್‌ಎಕ್ಯೂ ಗ್ರೇಡಿಂಗ್ ತರಬೇತಿ ನೀಡಬೇಕು. ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಾಲ್ ಶೇಂಗಾ ಖರೀದಿಸಬೇಕು. ಬೆಂಬಲ ಬೆಲೆಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

 ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಧಾ ಆರ್ ಬಂಡಿ ಅವರು ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‌ಗೆ 6,783 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದನ್ವಯ ದಿ; 24-10-2024 ರನುಸಾರ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಕರ್ನಾಟಕ ಸಹಕಾರಿ ಎಣ್ಣಿ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಿದ್ದು ರೈತರು ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಜರುಗಿಸಲಾಗುವುದು.

 ಜಿಲ್ಲೆಯ 10 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಉಪನಿಬಂಧಕರು, ಕೆ ಓ ಎಫ್ ವ್ಯವಸ್ಥಾಪಕರು ಹಾಜರಿದ್ದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಯನ್ವಯ ಜಿಲ್ಲೆಯ 10 ಕಡೆಗಳಲ್ಲಿನ ಶೇಂಗಾ ಖರೀದಿ ಕೇಂದ್ರಗಳು : ಗದಗ- ಬಳಗಾನೂರು, ಹೊಂಬಳ, ಮುಳಗುಂದ : ಶಿರಹಟ್ಟಿ- ರಣತೂರ, ಶಿಗ್ಲಿ ; ರೋಣ ಅಬ್ಬಿಗೇರಿ, ಸೂಡಿ: ನರಗುಂದ- ಕಣಕಿಕೊಪ್ಪ ; ಮುಂಡರಗಿ- ಬರದೂರು, ಕಲಕೇರಿ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ