ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸರ್ಕಾರ ಇಂದು (ಅಕ್ಟೋಬರ್ 30) ಬಿಡುಗಡೆ ಮಾಡಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು. ಕಲೆ, ಸಾಹಿತ್ಯ, ಜಾನಪದ, ಕೃಷಿ–ಪರಿಸರ, ವಿಜ್ಞಾನ–ತಂತ್ರಜ್ಞಾನ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.