ಗದಗ ನ.೩: ತಾಲೂಕ ಆಡಳಿತ, ತಾಲೂಕ ಪಂಚಾಯತ್,ತಾಲೂಕ ಹಿಂದುಳಿದ ಕಲ್ಲಾಣ ಇಲಾಖೆ ,ಇವರ ಸಂಯುಕ್ತ ಆಶ್ರಯದಲ್ಲಿ ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ,ನೊಂದವರ ನಂದಾದೀಪ, ಸಾಧನೆಗಳ ಸರದಾರ,ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ.ಡಿ.ದೇವರಾಜ ಅರಸು ಭವನ ಹಾಗೂ ಡಿ.ದೇವರಾಜ ಅರಸು ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯದ ಲೋಕಾರ್ಪಣೆಯಾಯಿತು.
ಗದಗಿನ ಸೂರ್ಯನಗರ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹಿಂಭಾಗದಲ್ಲಿ ನಿರ್ಮಿಸಲಾದ ಕಟ್ಟಡವನ್ನು ರವಿವಾರ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ,
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರವಿ ಲಕ್ಷ್ಮಣ ಗುಂಜೀಕರ, ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ, ಗದಗ-ಬೆಟಗೇರಿ ನಗರಸಭೆ ಆಯುಕ್ತ ಮಹೇಶ ಪೊತದಾರ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ವಿ.ಶಿರೋಳ, ಹಿಂದುಳಿದ ವರ್ಗಗಳ ತಾಲೂಕ ಕಲ್ಯಾಣಾಧಿಕಾರಿ ಡಾ.ಬಸವರಾಜ ವ್ಹಿ ಬಳ್ಳಾರಿ ಇವರುಗಳು ಸೇರಿದಂತೆ ವಸತಿನಿಲಯದ ಮಕ್ಕಳು ಹಾಗೂ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.