ಗದಗ ನ.5 : ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಶಿರಹಟ್ಟಿ ತಾಲ್ಲೂಕಿನ ವಡವಿ ಹಾಗೂ ಮಜ್ಜೂರ , ಮುಂಡರಗಿ ತಾಲ್ಲೂಕಿನ ಮೇವುಂಡಿ, ಗದಗ ತಾಲ್ಲೂಕಿನ ಬಿಂಕದಕಟ್ಟಿ ಗ್ರಾಮ ಪಂಚಾಯತಿಗಳ ಗ್ರಾಮ ಒನ್ ಕೇಂದ್ರಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಆಸಕ್ತ ಅಭ್ಯರ್ಥಿಗಳು ನವೆಂಬರ್ 15 ರೊಳಗಾಗಿ ಅರ್ಜಿಗಳನ್ನು https://www.karnatakaone.gov.in/Public/GramOneFranchiseeTerms ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ
.