- ಗದಗ ನ.5: 2024-25 ನೇ ಸಾಲಿನಲ್ಲಿ ಗದಗ ತಾಲೂಕಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾರ್ಯಕಾರಿ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆಗೆ ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಡಿಸೆಂಬರ್ 15 ರಂದು ಭಾನುವಾರ ಬೆಳಿಗ್ಗೆ 8.00 ರಿಂದ ಮದ್ಯಾಹ್ನ 3.00 ಗಂಟೆ ವರೆಗೆ ನಿಗದಿಪಡಿಸಲಾಗಿದೆ. ತಾಲೂಕು ಕೃಷಿಕ ಸಮಾಜದ ಅಜೀವ ಸದಸ್ಯರ ಪಟ್ಟಿಯನ್ನು ಗದಗ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಸೂಚನಾ ಫಲಕದಲ್ಲಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ತಿದ್ದುಪಡಿಗಳಿದ್ದಲ್ಲಿ ನವೆಂಬರ್ 12 ರೊಳಗೆ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ನಂ-18, ಕೃಷಿ ಭವನ ನೃಪತುಂಗ ರಸ್ತೆ, ಬೆಂಗಳೂರು-560001 ಇಲ್ಲಿಗೆ ತಲುಪುವಂತೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ, ಗದಗ ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಮಲ್ಲಯ್ಯ ಕೊರವನವರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ತಾಲೂಕು ಕೃಷಿಕ ಸಮಾಜದ ಚುನಾವಣೆ ಪ್ರಕ್ರಿಯೆ
RELATED ARTICLES