ಗದಗ: ಜಿಲ್ಲೆಯಲ್ಲಿ ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿದಂತ ತಂದೆ, ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆ ನಡೆದಿದೆ
ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿಯಲ್ಲಿರುವಂತ ತುಂಗಭದ್ರಾ ನದಿಗೆ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಎಸೆದು, ತಾನು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಮೃತರನ್ನು ವೇದಾಂತ(3), ಪವನ್(4) ಹಾಗೂ ಧನ್ಯಾ(6), ತಂದೆ ಮಂಜುನಾಥ್ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು, ಮೃತರ ಶವಗಳನ್ನು ತುಂಗಭದ್ರಾ ನದಿಯಿಂದ ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.