ಗದಗ : ನ.4 : ಗದಗ ಜಿಲ್ಲೆಯ ನರೇಗಲ್ ಬಳಿ ಸೋಮವಾರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗದಗ ಜಿಲ್ಲೆಯ ನರೇಗಲ್ ಹತ್ತಿರ ಗದಗ ನಗರದ ಭಜಂತ್ರಿ ಓಣೆಯ ನಿವಾಸಿ ಪರಶುರಾಮ ಭಜಂತ್ರಿ ವಯಾ : 40 . ಮೃತ ದುರ್ದೈವಿ. ಇವರು ಗುಡೂರ ಗ್ರಾಮಕ್ಕೆ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಗದಗ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ನರೇಗಲ್ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.