ಗದಗ : ಜಿಲ್ಲೆಯ ಗದಗ ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಸೋಮವಾರ (ನ.18) ಬೆಳ್ಳಗ್ಗೆ ನಡೆದಿದೆ.
ಹುಲಕೋಟಿ ಗ್ರಾಮದ ಸಮೀರ ತಂದೆ ಮಾಬುಸಾಬ ಗುಡಿಸಲಮನಿ (20) ,ಹೊಸಳ್ಳಿ ಗ್ರಾಮದ ಉಳಿವೇಶ ತಂದೆ ಚೆನ್ನಪ್ಪ ಅಂಗಡಿ, (15)ಮೃತಪಟ್ಟ ದುರ್ದೈವಿ ಗಳು ಎಂದು ತಿಳಿದು ಬಂದಿದೆ.
ಗಾಯಾಳು ಯುವತಿ ನೇತ್ರಾವತಿ ತಂದೆ ಪ್ರಕಾಶ್ ಹಡಪದ ಹೊಸಳ್ಳಿ ಗ್ರಾಮದ ನಿವಾಸಿ ಎನ್ನಲಾಗಿದೆ. ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ತಾಲೂಕಿನ ಹುಲಕೋಟಿ ಗ್ರಾಮದ ಸರ್ವಿಸ್ ರಸ್ತೆಯ ರೈತ ಸಂಪರ್ಕ ಕೇಂದ್ರದ ಹತ್ತಿರ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಡಿಕ್ಕಿಯಾದ ರಭಸಕ್ಕೆ ಎರಡೂ ಬೈಕುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ .
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಗದಗ ಗ್ರಾಮೀಣ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.