Wednesday, March 26, 2025
Google search engine
Homeಗದಗಗದಗ : ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಗದಗ : ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಗದಗ ನ 30 : ಗದಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 10 ರವರೆಗೆ ವಿಸ್ತರಿಸಲಾಗಿದೆ.

ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ’ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಜಿಲ್ಲಾ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊAದಿಗೆ ಅರ್ಜಿಸಲ್ಲಿಸಬೇಕು. ತರಬೇತಿಯ ಅವಧಿ ವೇಳೆ ಮಾಹೆಯಾನ 15,000/- ರೂ. ಗಳ ಸ್ಟೆöÊಫೆಂಡ್ ನೀಡಲಾಗುವುದು. ತರಬೇತಿಯು 2025 ರ ಜನವರಿಯಿಂದ ಡಿಸೆಂಬರ್ ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ. ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದುರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ರೂಮ್ ನಂ 30 ಗದಗ ಇವರನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ