ಗದಗ : ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವಂತಹ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ.
ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ. ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ.ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು.
ಇಂದು ಕೃಷಿ ಹೊಂಡದಲ್ಲಿ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿತ್ತು.