14.4 C
New York
Friday, May 9, 2025

Buy now

spot_img

ಗದಗ : ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ  ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ

 ಗದಗ  ಡಿಸೆಂಬರ್ 4: ಜಿಲ್ಲೆಯಲ್ಲಿ ಡಿಸೆಂಬರ್ 7 ಮತ್ತು 8 ರಂದು ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಹಾಗೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಡಿಸೆಂಬರ್ 7ರಂದು ಮಧ್ಯಾಹ್ನ 2 ಗಂಟೆಯಿAದ 4 ಗಂಟೆಯವರೆಗೆ ಹಾಗೂ ಡಿಸೆಂಬರ್ 8 ರಂದು ಬೆಳಿಗ್ಗೆ 10 ರಿಂದ 11.30 ಯವರೆಗೆ ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಗೋಡೆ ಗಡಿಯಾರಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿ ಸದಸ್ಯ ಸಮಿತಿಯನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಸೂಚಿಸಿದರು.

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಪ್ರಾರಂಭವಾಗುವುದಕ್ಕಿAತ 10 ನಿಮಿಷ ಮುಂಚೆಯೇ ಹಾಜರಾಗಿರಬೇಕು. (ಡಿ 7) ಶನಿವಾರದಂದು ಪರೀಕ್ಷೆಗಳು ಜರುಗುವ ಪರೀಕ್ಷಾ ಕೇಂದ್ರಗಳಲ್ಲಿನ ಶಾಲೆ ಕಾಲೇಜುಗಳನ್ನು ಆ ದಿವಸದ ಮಟ್ಟಿಗೆ ರಜೆಯೆಂದು ಘೋಷಿಸಬೇಕು. ಮುಂದಿನ ದಿನಗಳಲ್ಲಿ ಆ ದಿನದ ಅಧ್ಯಯನ ಸರಿದೂಗಿಸಿಕೊಳ್ಳಬೇಕು. ವಿಕಲಚೇತನರಿಗೆ ನೆಲಮಹಡಿಯ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯಾಗಬೇಕು. ಒಟ್ಟಾರೆಯಾಗಿ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರತಿಬಂಧಕಾಜ್ಞೆ ಜಾರಿ : ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಡಿಸೆಂಬರ್ 7 ಮತ್ತು 8 ರಂದು ಬೆ 8 ಗಂಟೆಯಿAದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ನಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತçಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊAದಿಗೆ ಮತ್ತು ಪರೀಕ್ರಾ ಕೊಠಡಿಯ ಸಂವೀಕ್ಷಕರೊAದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.

ವಸ್ತ ಸಂಹಿತೆ : ಶೂ,ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂ ಟೂಥ , ಕ್ಯಾಲ್ಕುಲೇಟರ್ , ವೈಟ್‌ಫ್ಲುಡ್ , ವೈರ್‌ಲೆಸ್ ಸೆಟ್ಸ್ , ಪೇಪರ್ , ಬುಕ್ಸ್ ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬುತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ. ಮೆಟಲ್‌ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ಇರುವುದಿಲ್ಲ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು.

ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಸ್.ಬಿ.ಸಂಕದ ಅವರು ಮಾತನಾಡಿ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಸುವ್ಯವಸ್ಥೆ , ಪಾರದರ್ಶಕತೆ ಕಾಪಾಡಲು ಪೊಲೀಸ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಸೇರಿದಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು.

 ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ. ಎ. ಕಂಬಾಳಿಮಠ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಹಾಂತೇಶ, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ