25.3 C
New York
Friday, June 13, 2025

Buy now

spot_img

ಗದಗ : ವಿಶೇಷ ತೆರಿಗೆ ವಸೂಲಾತಿ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ : ಇ ಓ ಮಲ್ಲಯ್ಯ ಕೊರವನವರ ಕರೆ

ಗದಗ : ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಿಸೆಂಬರ್ 11 ಬುಧವಾರ ‘ವಿಶೇಷ ತೆರಿಗೆ ವಸೂಲಾತಿ ಅಭಿಯಾನ’ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಎಲ್ಲಾ ಗ್ರಾ.ಪಂ ಸಿಬ್ಬಂದಿಗಳು ಕೈಜೋಡಿಸಿ ಅಭಿಯಾನ ಯಶಸ್ವಿಗೊಳಿಸಬೇಕೆಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಹೇಳಿದರು.

ಗ್ರಾಮ ಪಂಚಾಯಿತಿಗೆ ಸಲ್ಲಿಕೆ ಆಗಬೇಕಾಗಿರುವ ತೆರಿಗೆಯಲ್ಲಿ ಶೇ.100ರಷ್ಟು ವಸೂಲಿ ಮಾಡುವುದು ಗ್ರಾಪಂನ ಪ್ರಾಥಮಿಕ ಹೊಣೆಗಾರಿಕೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾ.ಪಂಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೋಢೀಕರಿಸಿಕೊಳ್ಳಲು ಕರವಸೂಲಾತಿ ಅಭಿಯಾನವನ್ನು ವಿಶೇಷ ಆಂದೋಲನವನ್ನಾಗಿ ತಾಲೂಕಿನಲ್ಲಿ ನಡೆಸಬೇಕಿದೆ. ಎಲ್ಲಾ ಗ್ರಾ.ಪಂಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಡಿ.11ರಿಂದ ಡಿ.30ರವರೆಗೆ ಕಡ್ಡಾಯವಾಗಿ ತೆರಿಗೆ ವಸೂಲಾತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದರು.

ತಾಲೂಕಿನ ಎಲ್ಲಾ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಕರ ವಸೂಲಾತಿ ಅಭಿಯಾನವನ್ನು ಗ್ರಾ.ಪಂ ಕಾರ್ಯದರ್ಶಿಗಳು, ನೀರಗಂಟಿಗಳು ಸಿಬ್ಬಂದಿಗಳು ಜೊತೆ ಸೇರಿಕೊಂಡು ಮನೆಗಳು, ಅಂಗಡಿ ಮುಂಗಟ್ಟು, ಮಳಿಗೆಗಳಿಗೆ ತೆರಳಿ ಕರ ವಸೂಲಾತಿ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಲು ಸಹಕಾರ ನೀಡಿದರೆ ನಿಗದಿತ ಗುರಿಯನ್ನು ಸಾಧಿಸಬಹುದು ಎಂದರು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ !