Friday, January 24, 2025
Google search engine
Homeಬ್ರೇಕಿಂಗ್ ಸುದ್ದಿBREAKING : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

BREAKING : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ.

ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ.

ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧] ೧೯೭೧ ರಿಂದ ೨೦೧೪ ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ ೨೦೨೩ರ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ ಬೆಟಗೇರಿ ವಕ್ಫ್ ಸಂಸ್ಥೆಯ ಚುನಾವಣೆ : ಸಾಮಾನ್ಯ ಸದಸ್ಯರ ನೋಂದಣಿಗೆ ಅಧಿಸೂಚನೆ ಗದಗ : ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ : ಸಂಗಮೇಶ ಬಬಲೇಶ್ವರ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗೆ ಗಂಭೀರ ಕ್ರಮ : ಸಚಿವ ಎಚ್.ಕೆ.ಪಾಟೀಲ ಲಕ್ಕುಂಡಿ : ಕಲ್ಲಿನಲ್ಲಿ ಅರಳಿದ ಶಿಲ್ಪಕಲೆಯ ಅನಾವರಣ Gadag : ವ್ಯಕ್ತಿತ್ವ ವಿಕಸನ ನಿತ್ಯದ ಪ್ರಕ್ರಿಯೆಯಾಗಲಿ.  ಗದಗ : ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸಕ ಮಾಲಿಕೆ ಕಾರ್ಯಕ್ರಮ ಮುಂಡರಗಿ : ಜ 22 : ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಮುಂಡರಗಿ  ಪಟ್ಟಣ ಸಂಪೂರ್ಣ ಸ್ಥಬ್ದ ! ಮುಂಡರಗಿ : ಜ 22 : ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಮುಂಡರಗಿ ಬಂದ್ ಗೆ ಕರೆ  ಗದಗ : ಯಶಸ್ವಿನಿ ಯೋಜನೆಯಡಿ ಸದಸ್ಯರನ್ನು ನೊಂದಾಯಿಸಲು ಅವಕಾಶ