ಗದಗ : ಜಿಲ್ಲಾ ಪಂಚಾಯತಿಯ SDA ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಎಸ್ ಡಿಎ ಮನೆ ಮೇಲೆ ಈ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಲೋಕಾಯುಕ್ತ ತಂಡವು, ಗದಗ ನಗರದ ರಾಧಾಕೃಷ್ಣ ಬಡಾವಣೆಯ ಮನೆ ಸೇರಿದಂತೆ ಐದು ಕಡೆಗಳಲ್ಲಿ ದಾಳಿ ಮಾಡಿದೆ. ಗದಗ, ಗಜೇಂದ್ರಗಡ, ಹಾವೇರಿಯಲ್ಲಿ ಕರ್ಣಿಗೆ ಸಂಬಂಧಿಸಿದ ಮನೆ, ಆಸ್ತಿಯನ್ನು ಪರಿಶೀಲನೆ ಮಾಡಿದ್ದು, ಆದಯ ಮೀರಿ ಆಸ್ತಿಗಳಿಗೆ ದೂರಿನ ಮೇಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಲೋಕಾಯುಕ್ತ ಎಸ್ ಪಿ ಹನುಮಂತ್ ರಾಯ, ಡಿಎಸ್ ಪಿ ವಿಜಯ್ ಬಿರಾದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.