ಗದಗ : ಗೃಹ ಲಕ್ಷ್ಮಿ ಹಣದಿಂದ ಈಗಾಗಲೇ ಟಿವಿ, ಫ್ರಿಡ್ಜ್, ಬೈಕ್ ಖರೀದಿಸಿಸಲಾಗಿತ್ತು. ಈಗ ಮುಂದುವರೆದು ಬೋರ್ ವೆಲ್ ಅನ್ನೇ ಗೃಹ ಲಕ್ಷ್ಮೀ ಹಣದಿಂದ ಅತ್ತೆ-ಸೊಸೆ ಕೊರೆಸಿದ್ದಾರೆ.
ಈ ಮಾಹಿತಿಯನ್ನು ಹಂಚಿಕೊಂಡಿರುವಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ರಾಜ್ಯದಲ್ಲಿ ತನ್ನದೇ ಆದ ಸದ್ದನ್ನು ಮಾಡುತ್ತಿದ್ದು, ಲಕ್ಷಾಂತರ ಕೆಲಸ ಕಾರ್ಯಗಳಿಗೆ ಗೃಹಲಕ್ಷ್ಮಿಯ ಹಣ ವರದಾನವಾಗಿದೆ.
ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2,000/- ರೂ, ಹಣ ಕೂಡಿಟ್ಟು ಗದಗ ಜಿಲ್ಲೆಯ ಗಜೇಂದ್ರಗಡ್ ಪಟ್ಟಣದ ಮಾಲದಾರ ಓಣಿಯ ಅತ್ತೆ ಹಾಗೂ ಸೊಸೆ ಬೊರವೆಲ್ ಹಾಕಿಸಿದ್ದು, ಬೊರವೆಲ್ ನಿಂದ ಒಳ್ಳೆಯ ನೀರನ್ನು ಪಡೆದಿದ್ದಾರೆ ಎಂದಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೊರವೆಲ್ ಹಾಕಿಸಲು ಒಟ್ಟು 60 ಸಾವಿರ ರೂ,ಗಳು ಖರ್ಚಾಗಿದ್ದು, ಗೃಹಲಕ್ಷ್ಮಿ ಯೋಜನೆಯ 44 ಸಾವಿರ ಬಳಕೆ ಮಾಡಲಾಗಿದೆ, ಇನ್ನುಳಿದ ಹಣ ಮಗ ನೀಡಿರುವುದಾಗಿ ತಿಳಿಸಿದ್ದಾರೆ.