ಗದಗ ಡಿ.16: 2024-25ನೇ ಸಾಲಿನಲ್ಲಿ ವಿವಿಧ ಕ್ರೀಡಾಕೂಟದಲ್ಲಿ ರಾಜ್ಯ, ರಾಷ್ಟ್ರವಿಶ್ವವಿದ್ಯಾಲಯ ಮತ್ತು ಅಂತರರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ವಿಜೇತರಾದ ಗದಗ ಜಿಲ್ಲೆಯ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರೋತ್ಸಾಹಧನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2024 ರ ಜನೇವರಿ 1 ರಿಂದ ಡಿಸೆಂಬರ್ 31 ರವರೆಗೆ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರವಿಶ್ವವಿದ್ಯಾಲಯ ಮತ್ತು ಅಂತರರಾಷ್ಟ್ರ ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆಗಳು, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಾರ್ಯಾಲಯ, ಲಭ್ಯವಿದ್ದು, ಡಿಸೆಂಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08372-238345 ಗೆ ಸಂಪರ್ಕಿಸಲು ಕೋರಿದೆ.