ಗದಗ : ಭೀಮ್ ಆರ್ಮಿ ಭಾರತ ಏಕತಾ ಮೀಷನ್ ಗದಗ ಜಿಲ್ಲಾ ಕಮೀಟಿ ವತಿಯಿಂದ ಗದಗ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲದ ಪಡೆದ ಬಡಮಹಿಳೆಯರಿಗೆ ಮಾನಸಿಕ ಹಿಂಸೆ ಮತ್ತು ಅಸಭ್ಯ ವರ್ತನೆ ಖಂಡಿಸಿ ಗದಗ ಜಿಲ್ಲಾಧಿಕಾರಿಗಳು ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ
,9 ನೆರವು ಒದಗಿಸುವ ಹೆಸರಿನಲ್ಲಿ ಸಾಲ ನೀಡಿ, ದೌರ್ಜನ್ಯ ಮತ್ತು ಬಲವಂತದ ಮೂಲಕ ಸಾಲ ವಸೂಲಿ ಮಾಡಲಾಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಮೈಕ್ರೋ ಫೈನಾನ್ಸ್ ಕಂಪನಿಗಳ ದುಬಾರಿ ಬಡ್ಡಿ ದರಗಳನ್ನು ಸಹಿಸಿಕೊಂಡು, ಕಷ್ಟಪಟ್ಟು ದುಡಿದು ಸಂಪಾದಿಸಿದ. ಹಣದಿಂದ ಸಾಲ ಮರುಪಾವತಿ ಮಾಡುತ್ತಾ ಬಂದಿದ್ದಾರೆ. ಆದರೆ. ಸತತ ನಾಲ್ಕು ವರ್ಷಗಳಿಂದ ಮಹಿಳೆಯರಿಗೆ ದುಡಿಮೆ ಇಲ್ಲ. ಸಾಲ ಮರುಪಾವತಿ ಮಾಡುವುದು ಅಸಾಧ್ಯವಾಗಿದೆ. ಇಂತಹ ಸಮಯದಲ್ಲಿ ಒತ್ತಡ ಹಾಕುವ ಮೂಲಕ ಸಾಲ ವಸೂಲಿಗೆ ಮುಂದಾಗುತ್ತಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ. ಮೈಕ್ರೋ ಫೈನಾನ್ಸ್ ಕಂಪನಿಗಳು ತಮ್ಮ ಸಿಬ್ಬಂದಿ, ಸಹಾಯಕರ ಮೇಲೆ ಒತ್ತಡ ಹಾಕಿ ಸಾಲ ಪಡೆದ ಮಹಿಳೆಯರ ಮನೆಯ ಮುಂದೆ ಕೂಡುವಂತೆ ಮಾಡುತ್ತಾರೆ ಇದನ್ನು ಭೀಮ್ ಆರ್ಮಿ ಏಕತಾ ಮೀಷನ್ ಗದಗ ಜಿಲ್ಲಾ ಕಮೀಟಿ ಉಗ್ರವಾಗಿ ಖಂಡಿಸುತ್ತದೆ.
ಫೈನಾನ್ಸ್ ಸಿಬ್ಬಂದಿ ಹಾಗೂ ಸಹಾಯಕರು ಸಾಲ ಪಡೆದ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಇದರಿಂದ ಸಾಕಷ್ಟು ಮಹಿಳೆಯರು ಮಾನಸಿಕ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಮೈಕ್ರೋ ಫೈನಾನ್ಸ್‌ಗಳಲ್ಲಿರುವ ಬಡ ಮಹಿಳೆಯರ ಎಲ್ಲ ಸಾಲವನ್ನು ಮನ್ನಾ ಮಾಡಬೇಕು ಹಾಗೂ ಯಾವುದೇ ಲೈಸೆನ್ಸ್ ಪಡೆಯದೇ ಕಾನೂನು ಬಾಹಿರವಾಗಿ ಹಣಕಾಸು ವ್ಯವಹಾರದಲ್ಲಿ ತೊಡಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಬೇಕು ಒತ್ತಡದಿಂದ ಸಾಲ ವಸೂಲಿ ಕ್ರಮಗಳನ್ನು ಕೈಗೊಂಡಿರುವ ಲೈಸೆನ್ಸ್ ಹೊಂದಿದ ಕಂಪನಿಗಳ ಲೈಸೆನ್ಸ್ ರದ್ದು ಮಾಡಬೇಕು. ಅವುಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದ ಮಹಿಳೆಯರಿಗೆ ರಕ್ಷಣೆ ನೀಡಬೇಕು ಎಂದು ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಗದಗ ಜಿಲ್ಲಾ ಕಮೀಟಿ ಜಿಲ್ಲಾಧ್ಯಕ್ಷರಾದ ಗೋಪಾಲ ಕೋಣಿಮನಿ ಗದಗ ಜಿಲ್ಲಾಧಿಕಾರಿಗಳನ್ನು ವಿನಂತಿಸಿದ್ದಾರೆ.