ಗದಗ : ಡಿಸೆಂಬರ್ 23 : ಗದಗ ಜಿಲ್ಲೆಯ ಗದಗ, ಮುಂಡರಗಿ, ನರಗುಂದ, ರೋಣ, ಗಜೇಂದ್ರಗಡ, ಶಿರಹಟ್ಟಿ ಹಾಗೂ ಲಕ್ಷೆö್ಮÃಶ್ವರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ, ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರ ಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 46 ಅಂಗನವಾಡಿ ಕಾರ್ಯಕರ್ತೆ ಹಾಗೂ 150 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ, ದಿನಾಂಕ: 17.08.2024 ರಿಂದ ದಿನಾಂಕ:17.09.2024 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬಸೈಟ್ ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ 01 ನೇ ಹಂತದಲ್ಲಿಯೇ appliation successfully uploaded ” ಎಂಬ ಮೆಸೇಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 828 ಅಪೂರ್ಣ ಅರ್ಜಿಗಳು ಹಾಗೂ ಸಹಾಯಕಿಯರ ಹುದ್ದೆಗೆ 734 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತವೆ.
ದಿನಾಂಕ:20-12-2024 ರ ಸರ್ಕಾರದ ಆದೇಶದಲ್ಲಿ, ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ದಿನಾಂಕ:26-12-2024 ರಿಂದ ದಿನಾಂಕ:05-01-2025 ರವರಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬಸೈಟ್ ನಲ್ಲಿ ಇಲಾಖಾ ವತಿಯಿಂದಲೇ ಅವಕಾಶ ನೀಡಿ ಆದೇಶಿಸಲಾಗಿರುತ್ತದೆ. ಅರ್ಜಿಗಳನ್ನು ಸಲ್ಲಿಸುವಾಗ 1,2,3,4ನೇ ಹಂತದಲ್ಲಿ ಪೂರ್ಣಮಾಡಲು ಆಗದೇ ಇರುವ ಅಪೂರ್ಣ ಅರ್ಜಿಗಳ ವಿವರಗಳನ್ನು ಜಿಲ್ಲಾ NIC ( https://gadag.nic.in ) ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಅಪೂರ್ಣಗೊಂಡ ಅರ್ಜಿದಾರರಿಗೆ ಪೂರ್ಣಗೊಳಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ, ಆದ್ದರಿಂದ ಅಪೂರ್ಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಪೂರ್ಣಗೊಳಿಸಲು ದಿನಾಂಕ:26-12-2024 ರಿಂದ ದಿನಾಂಕ:05-01-2025 ರಂದು ಸಂಜೆ 5.30 ರ ವರೆಗೆ ಕಾಲಾವಕಾಶ ನಿಗದಿಪಡಿಸಿದೆ.ಅಭ್ಯರ್ಥಿಗಳು ಅರ್ಜಿಯನ್ನು ಈ ಕೆಳಗಿನ 4 ಹಂತಗಳಲ್ಲಿ ಪೂರ್ಣಗೊಳಿಸಬೇಕಾಗಿರುತ್ತದೆ.
1. ಒಂದನೇ ಹಂತ – ಆನಲೈನ್ ತಂತ್ರಾAಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು.
2. ಎರಡನೇ ಹಂತ – ತಮ್ಮ ಭಾವಚಿತ್ರ ಸಹಿಯನ್ನು ಅಪ್ ಲೋಡ್ ಮಾಡುವುದು.
3. ಮೂರನೇ ಹಂತ – ತಮ್ಮ ದಾಖಲಾತಿಗಳನ್ನು ಅಪ್ ಲೋಡ್ ಮಾಡುವುದು.
4. ನಾಲ್ಕನೇ ಹಂತ – ತಮ್ಮ ಆಧಾರ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಿಗೆ, ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.