Friday, January 24, 2025
Google search engine
Homeಆರೋಗ್ಯBreaking: ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ವಿಧಿವಶ

Breaking: ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ವಿಧಿವಶ

ನವದೆಹಲಿ : ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞ ಸಿಂಗ್ ಅವರನ್ನು ಆರೋಗ್ಯ ಹದಗೆಟ್ಟ ನಂತರ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಯಿತು.

ಆರೋಗ್ಯ ಕಾರಣಗಳಿಂದಾಗಿ ಸಿಂಗ್ ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಿಂದ ದೂರ ಉಳಿದಿದ್ದರು. ಇವರಿಗೆ 2024 ರ ಆರಂಭದಿಂದ ಆರೋಗ್ಯ ಸರಿ ಇರಲಿಲ್ಲ. ಅವರು ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಜನವರಿ 2024 ರಲ್ಲಿ ಅವರ ಮಗಳ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ.ಅವರು ಏಪ್ರಿಲ್ 2024 ರಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು.

ಮನಮೋಹನ್ ಸಿಂಗ್ ಅವರು ಸತತ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. 2004 ರಿಂದ 2014 ರವರೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಮುನ್ನಡೆಸಿದರು. ಅವರು 1991 ರಲ್ಲಿ ಪಿ.ವಿ.ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಭಾರತದ ಆರ್ಥಿಕ ಉದಾರೀಕರಣದ ವಾಸ್ತುಶಿಲ್ಪಿಯಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news