23 C
New York
Friday, July 4, 2025

Buy now

spot_img

ಗದಗ : ಜಿಲ್ಲಾಡಳಿತದಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಗದಗ  ಜ,01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ವತಿಯಿಂದ ಗದಗ ನಗರದ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಬುಧವಾರ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆ ನಿಮಿತ್ತ ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ ಅವರು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಮರ್ಪಿಸಿದರು.

ದೇಶದ ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನೆಲೆಯಲ್ಲಿ, ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ, ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಗದಗ ಬೆಟಗೇರಿ ನಗರ ಸಭೆಯ ಪೌರಾಯುಕ್ತ ಮಹೇಶ್ ಪೋತದಾರ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಗೂ ಸಮಾಜದ ಮುಖಂಡರು ಜಕಣಾಚಾರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ ಗದಗ : ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ