Monday, February 17, 2025
Google search engine
Homeಗದಗಗದಗ : ಜಿಲ್ಲೆಯಲ್ಲಿ 2478 ಅಭ್ಯರ್ಥಿಗಳು ಯುವ ನಿಧಿ ಯೋಜನೆಗೆ ನೋಂದಣಿ

ಗದಗ : ಜಿಲ್ಲೆಯಲ್ಲಿ 2478 ಅಭ್ಯರ್ಥಿಗಳು ಯುವ ನಿಧಿ ಯೋಜನೆಗೆ ನೋಂದಣಿ

ಗದಗ  ಜನೆವರಿ 3: ಜಿಲ್ಲೆಯಲ್ಲಿ 2023-2024 ರಲ್ಲಿ 2478 ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಣಿ ಮಾಡಿಸಿದ್ದು ಅವರಿಗೆ 4.12 ಕೋಟಿ ರೂ. ಮೊತ್ತವನ್ನು ಡಿ.ಬಿ.ಟಿ. ಮೂಲಕ ಸಂದಾಯಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ನಾಗಾವಿಯ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಆಡಿಟೋರಿಯಂದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.

 ಜಿಲ್ಲೆಯ ಐತಿಹಾಸಿಕ ಪಾರಂಪರಿಕ ಲಕ್ಕುಂಡಿಯು ಸಾಂಸ್ಕೃತಿಕ, ಐತಿಹಾಸಿಕ, ಶಿಲ್ಪಕಲಾ ನೈಪುಣ್ಯತೆಗೆ ತನ್ನದೇ ಆದ ಛಾಪು ಮೂಡಿಸಿದೆ. ಬರುವ 2025 ಜನೇವರಿ 26 ರಂದು ಜರುಗುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕ ರಾಜ್ಯದಿಂದ ಐತಿಹಾಸಿಕ ಲಕ್ಕುಂಡಿಯ ಬ್ರಹ್ಮಜಿನಾಲಯದ ಸ್ತಬ್ಧಚಿತ್ರವು ಆಯ್ಕೆಯಾಗಿದ್ದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಲಕ್ಕುಂಡಿ ಪ್ರಾಚ್ಯಾವಶೇಷಗಳ ಅನ್ವೇಷಣೆಯನ್ನು ಈಗಾಗಲೇ ಕೈಗೊಳ್ಳಲಾಗಿದ್ದು ಸಾರ್ವಜನಿಕರಿಗೆ ಲಕ್ಕುಂಡಿಯ ಕುರಿತು ತಿಳುವಳಿಕೆ ನೀಡುವ ಮಹತ್ತರವಾದ ಕೆಲಸವನ್ನು ಮಾಡಲಾಗಿದೆ. ಈ ನಿಟ್ಟಿನಲ್ಲಿ ಲಕ್ಕುಂಡಿಗೆ ಮಹತ್ವ ಪಡೆದಿದ್ದು ಬೆಳಗಾವಿ ಅಧಿವೇಶನದಲ್ಲಿ ನಡೆದ ಸಚಿವ ಸಂಪುಟ 5 ಕೋಟಿ ರೂ. ಲಕ್ಕುಂಡಿ ಅಭಿವೃದ್ಧಿಗಾಗಿ ಮಂಜೂರು ಮಾಡಲಾಗಿದೆ ಎಂದರು.

 ಗದಗ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಲಾಗುತ್ತಿದೆ. ಒಂದು ವೇಳೆ ನಗರದಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ದೂರವಾಣಿ ಕರೆಗಳು ಬಂದಲ್ಲಿ ಅಂತಹ ಪ್ರದೇಶಗಳಲ್ಲಿ ತಕ್ಷಣವೇ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದು. ಜಿಲ್ಲಾಧಿಕಾರಿಗಳಿಗೆ ನೀರಿನ ಪೂರೈಕೆಗೆ ಸಂಬಂಧಿಸಿದಂತೆ ಪೈಪ್‌ಲೈನ್‌ಗಳ ರಿಪೇರಿ ಕಾರ್ಯಗಳನ್ನು ತುರ್ತು ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ ಎಂದರು.

ರೈತರಿಗೆ ಬರುವಂತಹ ಬೆಳೆ ವಿಮೆ ಹಣ ಪೂರ್ಣ ಪ್ರಮಾಣದಲ್ಲಿ ಅವರಿಗೇ ತಲುಪಬೇಕು. ಒಂದು ವೇಳೆ ಈ ಮಧ್ಯದಲ್ಲಿ ಬ್ಯಾಂಕ್ ಮ್ಯಾನೇಜರ್, ವರ್ತಕರು, ದಲ್ಲಾಳಿಗಳು ಏನಾದರೂ ಸಂಭಾವನೆ ಕೇಳಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿ.ಪಂ. ಮಾಜಿ ಅಧ್ಯಕ್ಷ ಸಿದ್ಧು ಪಾಟೀಲ, ಬಸವರಾಜ ಕಡೆಮನಿ ಸೇರಿದಂತೆ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ ಗದಗ : ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರ ಪ್ರವಾಸ ಕಾರ್ಯಕ್ರಮ ಗದಗ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ ಪ್ರವಾಸ ಗದಗ : ಬೆಟಗೇರಿಯ  ಬಡ್ಡಿ ದಂಧೆಕೋರನ  ಖಜಾನೆ ಭೇದಿಸಿದ  ಗದಗ ಪೊಲೀಸರು ! ಮೈಕ್ರೋ ಫೈನಾನ್ಸ್ ಕಿರುಕುಳ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.! ಗದಗ : ಸೈಬರ್ ಅಪರಾಧಗಳ ಸುರಕ್ಷಾ ಸಲಹೆಗಳನ್ನು ಪಾಲಿಸಿ ಸೈಬರ್ ವಂಚಿಕರಿಂದ ಎಚ್ಚರವಾಗಿರಿ ಗದಗ : ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಗದಗ : ಜೀತ ಪದ್ಧತಿ ಒಂದು ಅಪರಾಧ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಅಂತೂರ ಗ್ರಾಮ ಪಂಚಾಯಿತಿಗೆ ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತ ಪುರಸ್ಕಾರ.